Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೋಕ್ಸೋ ಪ್ರಕರಣದ ಆರೋಪಿ ಗ್ರಾಮ ಲೆಕ್ಕಾಧಿಕಾರಿಗೆ ಮೂರು ವರ್ಷ ಜೈಲು ಶಿಕ್ಷೆ, ದಂಡ
    ಇತ್ತೀಚಿನ ಸುದ್ದಿ

    ಪೋಕ್ಸೋ ಪ್ರಕರಣದ ಆರೋಪಿ ಗ್ರಾಮ ಲೆಕ್ಕಾಧಿಕಾರಿಗೆ ಮೂರು ವರ್ಷ ಜೈಲು ಶಿಕ್ಷೆ, ದಂಡ

    October 13, 2023
    Share

    ಉಡುಪಿ: ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐದು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಗ್ರಾಮ ಲೆಕ್ಕಾಧಿಕಾರಿಯೊಬ್ಬರಿಗೆ ಮೂರು ವರ್ಷಗಳ ಕಾರಾಗೃಹ ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಗುರುವಾರ ಆದೇಶಿಸಿದೆ. 2018ರಲ್ಲಿ ಹೆಜಮಾಡಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೇ ಈ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ಆರೋಪಿ. 17 ವರ್ಷದ ಪ್ರಾಯದ ನೊಂದ ಬಾಲಕಿ ತನ್ನ ಚಿಕ್ಕಮ್ಮಳೊಂದಿಗೆ ತನ್ನ ಅಕ್ಕನ ಜಾಗದ ತಕರಾರಿಗೆ ಸಂಬಂಧಿಸಿದಂತೆ ದಾಖಲೆಗಳ ಬಗ್ಗೆ ವಿಚಾರಿಸಲು ಹೆಜಮಾಡಿ ಗ್ರಾ.ಪಂ.ಕಚೇರಿಗೆ ಹೋಗಿದ್ದು, ಈ ವೇಳೆ ಆರೋಪಿಯು ನೊಂದ ಬಾಲಕಿ ಮತ್ತು ಆಕೆಯ ಚಿಕ್ಕಮ್ಮನನ್ನು ವಾಪಾಸು ಕಳುಹಿಸಿ ಅವರನ್ನು ಹಿಂಬಾಲಿಸಿಕೊಂಡು ಬಂದು ಬಸ್ ನಿಲ್ದಾಣದ ಬಳಿ ನಿಮ್ಮ ಕೆಲಸ ಆಗಿದೆ ಎಂದು ಹೇಳಿ 5 ಸಾವಿರ ರೂ.ಪಡೆದನು. ಅನಂತರ ನೊಂದ ಬಾಲಕಿಯೊಂದಿಗೆ ಸಲುಗೆಯಿಂದ ಮಾತನಾಡಿ ಆಕೆಯ ಮೊಬೈಲ್ ಸಂಖ್ಯೆ ಪಡೆದುಕೊಂಡಿದ್ದನು ಎಂದು ದೂರಲಾಗಿದೆ. ಬಳಿಕ ಆಕೆಗೆ ನಿರಂತರವಾಗಿ ಕರೆ ಮಾಡಿ ಕಿರುಕುಳ ನೀಡುತ್ತಿದ್ದ ಆರೋಪಿ, ನೊಂದ ಬಾಲಕಿ ತಾನು ಅಪ್ರಾಪ್ತ ಎಂದು ಹೇಳಿಕೊಂಡರೂ ಆತ ಆಕೆಯನ್ನು ಮದುವೆಯಾಗುವುದಾಗಿ ತಿಳಿಸಿ ಆಕೆಯ ಅಶ್ಲೀಲ ಚಿತ್ರಗಳನ್ನು ಕಳುಹಿಸುವಂತೆ ಹೇಳುತ್ತಿದ್ದನು. ಬಳಿಕ ಹೆಜಮಾಡಿಯ ಹೊಟೇಲ್‌ವೊಂದಕ್ಕೆ ಆಕೆಯನ್ನು ಬರಲು ಹೇಳಿದ್ದು, ಆಕೆ ನಿರಾಕರಿಸಿದಕ್ಕೆ ನೊಂದ ಬಾಲಕಿಯ ತಾಯಿಯ ವಿಧವಾ ವೇತನವನ್ನು ಬ್ಲಾಕ್ ಮಾಡುವುದಾಗಿ ಹೆದರಿಸಿದ್ದನು. ಅದರಂತೆ ಸಂತ್ರಸ್ತೆ ತನ್ನ ತಮ್ಮನೊಂದಿಗೆ ಹೊಟೇಲ್‌ಗೆ ಹೋದಾಗ ಆಕೆಯ ಅಶ್ಲೀಲ ಭಾವಚಿತ್ರ ನೀಡುವಂತೆ ತಿಳಿಸಿದನು. ಇದಕ್ಕೆ ಒಪ್ಪದಿದ್ದಕ್ಕೆ ಆಕೆಯ ತಲೆಗೆ ಕೈಯಿಂದ ಹೊಡೆದಿದ್ದನು. ಈ ವಿಚಾರವನ್ನು ನೊಂದ ಬಾಲಕಿ ಹಾಗೂ ಆಕೆಯ ತಮ್ಮ ಮನೆಯವರಿಗೆ ತಿಳಿಸಿದ್ದು, ಅದರಂತೆ ಮನೆಯವರು ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    Post Views: 169

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.