Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುಬ್ರಮಣ್ಯ : ಹಿಂಸಾತ್ಮಕವಾಗಿ ಗೋಸಾಗಾಟ- ಇಬ್ಬರು ಅರೆಸ್ಟ್
    ಇತ್ತೀಚಿನ ಸುದ್ದಿ

    ಸುಬ್ರಮಣ್ಯ : ಹಿಂಸಾತ್ಮಕವಾಗಿ ಗೋಸಾಗಾಟ- ಇಬ್ಬರು ಅರೆಸ್ಟ್

    March 7, 2025
    Share

    ಸುಬ್ರಹ್ಮಣ್ಯ: ಮಾಂಸ ಮಾಡುವವರಿಗೆ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಾಟ ನಡೆಸುತ್ತಿದ್ದದನ್ನು ಪತ್ತೆ ಹಚ್ಚಿದ ಸುಬ್ರಹ್ಮಣ್ಯ ಪೊಲೀಸರು ಜಾನುವಾರು ಹಾಗೂ ವಾಹನವನ್ನು ವಶಕ್ಕೆ ಪಡೆದ ಘಟನೆ ಮಾ.5ರಂದು ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಹರಿಹರ ಪಳ್ಳತ್ತಡ್ಕದಿಂದ ಬಿಸಿಲೆ ಕಡೆಗೆ ಪಿಕಪ್‌ ವಾಹನದಲ್ಲಿ ಅಕ್ರಮ ಗೋ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ  ಮೇರೆಗೆ ದಾಳಿ ನಡೆಸಿದ ಸುಬ್ರಹ್ಮಣ್ಯ ಎಸೈ ಕಾರ್ತಿಕ್‌ ನೇತೃತ್ವದ ಸುಬ್ರಹ್ಮಣ್ಯ ಪೊಲೀಸರು, ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ-ಬಿಸಿಲೆ ರಸ್ತೆಯ ಕುಲ್ಕುಂದ ಎಂಬಲ್ಲಿ ಪಿಕಪ್‌ ವಾಹನವನ್ನು ತಡೆದು ಪರಿಶೀಲಿಸಿದ್ದು, ಪರಿಶೀಲನೆ ವೇಳೆ ಆರೋಪಿಗಳು ಮೂರು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಸಾಗಾಟ ನಡೆಸುತ್ತಿದ್ದು, ಯಾವುದೇ ಪರವಾನಗಿ ಹೊಂದಿರಲಿಲ್ಲ.

    ವಿಚಾರಣೆ ವೇಳೆ ಆರೋಪಿಗಳು,  ಶನಿವಾರಸಂತೆ ಕಡೆಗೆ ಜಾನುವಾರುಗಳನ್ನು ಕಡಿದು ಮಾಂಸ ಮಾಡುವವರಿಗೆ ಮಾರಾಟ ಮಾಡಲು ಸಾಗಾಟ ನಡೆಸುತ್ತಿರುವುದಾಗಿ  ತಿಳಿಸಿದ್ದಾರೆ. 

    ಜಾನುವಾರುಗಳ ಸಾಗಾಟ ನಡೆಸಿದ ಪಿಕಪ್‌ ವಾಹನ ಸಹಿತ ಮೂರು ಜಾನುವಾರುಗಳನ್ನು ವಶಕ್ಕೆ ಪಡೆದ ಪೊಲೀಸರು  ಕೃತ್ಯದಲ್ಲಿ ಭಾಗಿಯಾದ ಇಬ್ಬರು ಆರೋಪಿಗಳಾದ ಗಿರೀಶ್‌, ಸತೀಶ್‌ ಎಂಬವರನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 144

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.