ಉಡುಪಿ ಜಿಲ್ಲೆಯ ಕಾಪು ಸಮೀಪದ ಇನ್ನಂಜೆ ವಿಷ್ಣುಮೂರ್ತಿ ದೇವಸ್ಥಾನ ಕೆರೆಯಲ್ಲಿ ಯುವಕನ ಶವವೊಂದು ಪತ್ತೆಯಾಗಿದ್ದು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಪಡುಬಿದ್ರಿ ನಿವಾಸಿ ವಿನಯ ರಾವ್(27) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದು ಬಂದಿದೆ.
ಈತ ಪಾಲಿಟೆಕ್ನಿಕ್ ಕಾಲೇಜೊಂದರಲ್ಲಿ ಅಥಿತಿ ಉಪನ್ಯಾಸಕನಾಗಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದ್ದು, ಈತ ನಿನ್ನೆಯ ದಿನ ದೇವಳದ ಪಕ್ಕದಲ್ಲಿ ಸುತ್ತಾಡಿಕೊಂಡಿದ್ದು ಸ್ಥಳೀಯ ನಾಯಿಯೊಂದಿಗೆ ಆಟವಾಡಿಕೊಂಡಿದ್ದ ಎಂಬುದಾಗಿ ಸ್ಥಳೀಯರು ತಿಳಿಸಿದ್ದಾರೆ.ಇಂದು ಮುಂಜಾನೆ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೆರೆಯ ದಡದಲ್ಲಿ ಲ್ಯಾಪ್ಟಾಪ್ ಸಹಿತ ಕೆಲ ಪರಿಕರಗಳು ಪತ್ತೆಯಾಗಿದೆ.
ದೇವಳದ ಸಿಸಿ ಕ್ಯಾಮಾರ ಸಾಧನವನ್ನು ಪರಿಶೀಲನೆ ನಡೆಸಿದಾಗ ಈತ ರಾತ್ರಿ ಹನ್ನೆರಡರ ಬಳಿಕ ದೇವಳದ ಪರಿಸರದಲ್ಲಿ ಸುತ್ತಾಡುತ್ತಿದ್ದ ದೃಶ್ಯ ಸೆರೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಸ್ಥಳಕ್ಕೆ ಬಂದ ಕಾಪು ಪೊಲೀಸರು ಸಾರ್ವಜನಿಕ ಸಹಕಾರದಿಂದ ಶವವನ್ನು ಕೆರೆಯಿಂದ ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಸಾಗಿಸಿದ್ದಾರೆ
ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.