ವಿಟ್ಲ: ಇಡ್ಕಿದು ಗ್ರಾಮದ ಚೈತನ್ಯ ಕುಮೇರು ನಿವಾಸಿ ಅರವಿಂದ ಭಾಸ್ಕರ್ (39) ಅನುಮಾನಾಸ್ಪದ ಸಾವಿನ ವಿಚಾರಕ್ಕೆ ಸಂಬಂಧಿಸಿದಂತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅರವಿಂದ ಭಾಸ್ಕರ ರವರ ಸಂಬಂಧಿ ನೀಡಿದ ದೂರಿನ ಮೇರೆಗೆ ಅರವಿಂದ ಭಾಸ್ಕರ್ ರವರ ಪತ್ನಿ ಹಾಗೂ ಯೋಗೀಶ್ ಗೌಡ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.
ಮೃತ ಅರವಿಂದ ಭಾಸ್ಕರ ರವರ ಮೃತದೇಹದ ಸ್ಥಿತಿಗತಿಯನ್ನು ನೋಡಿದಾಗ ಅರವಿಂದ ಭಾಸ್ಕರನ ಕುತ್ತಿಗೆಯನ್ನು ಅಮುಕಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಸಂಶಯವಿರುವುದಾಗಿ ಹಾಗೂ ಫೆ. 25 ರಂದು ರಾತ್ರಿಯಿಂದ ಫೆ.26 ರ ಬೆಳಿಗ್ಗೆಯ ಮಧ್ಯ ಸಮಯದಲ್ಲಿ ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಚೈತನ್ಯಕುಮೇರು ಎಂಬಲ್ಲಿ ಮೃತರ ವಾಸದ ಮನೆಯಲ್ಲಿ ಆರೋಪಿಗಳಾದ ಯೋಗೀಶ ಗೌಡ ಹಾಗೂ ಅರವಿಂದ ಭಾಸ್ಕರನ ಪತ್ನಿ ಆಶಾ ರವರು ಒಟ್ಟು ಸೇರಿಕೊಂಡು ಕೊಲೆ ಮಾಡುವ ಸಮಾನ ಉದ್ದೇಶದಿಂದ ಕುತ್ತಿಗೆಯನ್ನು ಅಮುಕಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 30/2023 ಕಲಂ: ಕಲಂ 302 ಜೊತೆಗೆ 34 ಐಪಿಸಿ ಮತ್ತು ಕಲಂ 3(2)(V),3(2)(Va) SC/ST (POA) Ammendmanent Act-2015 ಕಲಂ ಗಳ ಅಡಿಯಲ್ಲಿ ಅವರುಗಳ ವಿರುದ್ದ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.