Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಂದಿನಿಂದ 80ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ
    ಇತ್ತೀಚಿನ ಸುದ್ದಿ

    ಇಂದಿನಿಂದ 80ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ

    April 29, 2023
    Share

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳು, ಸ್ಟಾರ್ ಪ್ರಚಾರಕರ ಅಬ್ಬರ ಜೋರಾಗಿದೆ. ಈ ನಡುವೆ ಏಪ್ರಿಲ್ 29ರ ಶನಿವಾರದ ಇಂದಿನಿಂದ ವಿಧಾನಸಭಾ ಚುನಾವಣೆಗೆ ಮತದಾನ ಆರಂಭಗೊಳ್ಳಲಿದೆ.

    80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಹೀಗಾಗಿ ಬ್ಯಾಲೆಟ್ ಪೇಪರ್ ವೋಟಿಂಗ್ ಪ್ರಕ್ರಿಯೆ ನಾಳೆಯಿಂದಲೇ ಆರಂಭಗೊಳ್ಳಲಿದೆ.

    ಈಗಾಗಲೇ ಈ ಬಗ್ಗೆ ಚುನಾವಣಾ ಆಯೋಗದಿಂದ ಮಾಹಿತಿ ಬಿಡುಗಡೆ ಮಾಡಲಾಗಿದೆ. ಏಪ್ರಿಲ್ 29ರಿಂದ ಮೇ.6ರವರೆಗೆ 80 ವರ್ಷ ಮೇಲ್ಪಟ್ಟವರಿಗೆ, ಅಂಗವಿಕಲರು ಹಾಗೂ ವಿಕಲಚೇತನರಿಗೆ ಚುನಾವಣಾ ಸಿಬ್ಬಂದಿಗಳು ಬ್ಯಾಲೆಟ್ ಪೇಪರ್ ನೀಡುವ ಮೂಲಕ ಮತದಾನ ಪ್ರಕ್ರಿಯೆಯನ್ನು ನಡೆಸಲಿದ್ದಾರೆ ಎಂದಿದೆ.

    ರಾಜ್ಯದಲ್ಲಿ 12.15 ಲಕ್ಷದಷ್ಟು 80 ವರ್ಷ ಮೇಲ್ಪಟ್ಟವರಿದ್ದಾರೆ. ಅವರಿಗೆಲ್ಲ ಇಂದಿನಿಂದ ಮನೆ ಮನೆಗೆ ತೆರಳಿ ಚುನಾವಣಾ ಸಿಬ್ಬಂದಿಗಳು ಬ್ಯಾಲೆಟ್ ಪೇಪರ್ ನೀಡಿ, ಮತದಾನ ಪ್ರಕ್ರಿಯೆಯನ್ನು ನಡೆಸಲಿದ್ದಾರೆ.

    ಇನ್ನೂ ಬೆಂಗಳೂರಿನಲ್ಲಿ 80 ವರ್ಷ ಮೇಲ್ಪಟ್ಟವರ ಸಂಖ್ಯೆ 2 ಲಕ್ಷಕ್ಕೂ ಹೆಚ್ಚು ಮಂದಿ ಇದ್ದಾರೆ. ಇವರಲ್ಲಿ 9,152 ಮಂದಿ ಮತದಾರರು ಮನೆಯಿಂದಲೇ ಬ್ಯಾಲೆಟ್ ಪೇಪರ್ ವೋಟಿಂಗ್ ಮಾಡಲಿದ್ದಾರೆ.

    ಬ್ಯಾಲೆಟ್ ಪೇಪರ್ ವೋಟಿಂಗ್ ಹೇಗೆ ನಡೆಯಲಿದೆ?

    ಇಂದು ಆರಂಭಗೊಳ್ಳುತ್ತಿರುವಂತ ಬ್ಯಾಲೆಟ್ ಪೇಪರ್ ವೋಟಿಂಗ್ ಅಂದ್ರೆ ಏನು ಅನ್ನೋದು ಅನೇಕರಿಗೆ ಕುತೂಲಹವಾಗಿದೆ. ಇದೊಂದು ಗೌಪ್ಯ ಮತದಾನದ ವ್ಯವಸ್ಥೆಯಾಗಿದೆ. ಸ್ಥಳೀಯ ಪೊಲೀಸರು ಹಾಗೂ ಚುನಾವಣಾ ಸಿಬ್ಬಂದಿಗಳ ಸಮ್ಮುಖದಲ್ಲಿ ಹಿರಿಯ ನಾಗರೀಕರು, ಅಂಗವಿಕಲರಿಗೆ ಬ್ಯಾಲೆಟ್ ಪೇಪರ್ ನಲ್ಲಿ ಮತ ಚಲಾಯಿಸಲು ನೀಡಲಾಗುತ್ತದೆ.

    ಚುನಾವಣಾ ಸಿಬ್ಬಂದಿ ನೀಡುವಂತ ಬ್ಯಾಲೆಟ್ ಪೇಪರ್ ನಲ್ಲಿ 80 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರು ತಮ್ಮ ಮತವನ್ನು ಗೌಪ್ಯವಾಗಿ ಚಲಾಯಿಸಿ, ಮತಪೆಟ್ಟಿಗೆಯಲ್ಲಿ ಹಾಕಲಿದ್ದಾರೆ. ಈ ಮತಪೆಟ್ಟಿಗೆಯನ್ನು ಮತದಾನದ ನಂತ್ರ ಸ್ಟ್ರಾಂಗ್ ರೂಮ್ ನಲ್ಲಿ ಇರಿಸಲಾಗುತ್ತದೆ. ಮೇ.13ರ ಮತಏಣಿಕೆಯಂದು, ಈ ಮತಗಳನ್ನು ಏಣಿಕೆ ಮಾಡಲಾಗುತ್ತದೆ.

    Post Views: 292

    Related Posts

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.