Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಮತದಾನ ಮಾಡುವ ಫೋಟೋ ಕ್ಲಿಕ್ಕಿಸಿ ವೈರಲ್ – ಯುವಕನ ಮೇಲೆ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಪುತ್ತೂರು: ಮತದಾನ ಮಾಡುವ ಫೋಟೋ ಕ್ಲಿಕ್ಕಿಸಿ ವೈರಲ್ – ಯುವಕನ ಮೇಲೆ ಪ್ರಕರಣ ದಾಖಲು

    April 27, 2024
    Share

    ಪುತ್ತೂರು: ಮತದಾನ ಪ್ರಕ್ರಿಯೆ ಗೌಪ್ಯವಾಗಿ ಆಗಬೇಕಾದದ್ದು ನಿಯಮ. ಆದರೆ ಮತದಾನ ಮಾಡುತ್ತಿರುವ ದೃಶ್ಯವನ್ನು ಮತದಾರನಿಬ್ಬ ಮೊಬೈಲ್‌ನಲ್ಲಿ ಫೋಟೋ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಘಟನೆ ಶುಕ್ರವಾರ ನಡೆದಿದೆ. ದಕ್ಷಿಣ ಕನ್ನಡ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಪುತ್ತೂರು ತಾಲೂಕಿನ ಮತಗಟ್ಟೆಯೊಂದರಲ್ಲಿ ತಾನು ಮತದಾನ ಮಾಡುತ್ತಿದ್ದ ಫೋಟೊವನ್ನು ಕ್ಲಿಕ್ಕಿಸಿ ಯುವಕನೋರ್ವನು ವೈರಲ್ ಮಾಡಿದ್ದ. ಮತಗಟ್ಟೆಯೊಳಗೆ ಮೊಬೈಲ್ ಫೋನ್ ಒಯ್ಯುವುದು ನಿಷೇಧವಿದ್ದರೂ, ಈತ ಮೊಬೈಲ್ ಕೊಂಡೊಯ್ದಿದ್ದ. ಮತದಾನ ಮಾಡುವ ದೃಶ್ಯವನ್ನು ಕ್ಲಿಕ್ಕಿಸಿಕೊಂಡಿದ್ದಾರೆ. ಬಳಿಕ ಆ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಟ್ಟಿದ್ದಾನೆ. ಪುತ್ತೂರು ವಿಧಾನಸಭಾ ಕ್ಷೇತ್ರ – 206ರ ಮತಗಟ್ಟೆ ಸಂಖ್ಯೆ 147ರಲ್ಲಿ ಮತದಾನ ಮಾಡಿರುವ, ಆರ್ಯಾಪು, ಪುತ್ತೂರು ತಾಲೂಕು ನಿವಾಸಿ ರಂಜಿತ್ ಬಂಗೇರ ಎಂಬಾತ ತನ್ನ ಮತದಾನ ಮಾಡುವಾಗ ಮೊಬೈಲ್ ನಿಂದ ಫೋಟೋ ಕ್ಲಿಕ್ಕಿಸಿ ವಾಟ್ಸಪ್ ಗ್ರೂಪಿನಲ್ಲಿ ಹಂಚಿಕೊಂಡಿದ್ದ. ಈ ಬಗ್ಗೆ ಫ್ಲಯಿಂಗ್ ಸ್ಕ್ವಾಡ್ -2 ರ ಉಸ್ತುವಾರಿ ಅಧಿಕಾರಿಗಳ ನೀಡಿದ ದೂರಿನ ಮೇರೆಗೆ, ಕಲಂ:171 (ಎಫ್), 188 ಭಾರತೀಯ ದಂಡ ಸಂಹಿತೆ ಮತ್ತು ಕಲಂ: 123 ಪ್ರಜಾಪ್ರತಿನಿಧಿ ಕಾಯ್ದೆ 1951 ಯಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 221

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.