Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಇಂದಿನಿಂದ ಮೂರು ದಿನ ಹಿರಿಯ ನಾಗರಿಕರು, ದಿವ್ಯಾಂಗರಿಗೆ ಮನೆಯಲ್ಲಿ ಮತದಾನ – ಡಿಸಿ
    ಇತ್ತೀಚಿನ ಸುದ್ದಿ

    ಮಂಗಳೂರು: ಇಂದಿನಿಂದ ಮೂರು ದಿನ ಹಿರಿಯ ನಾಗರಿಕರು, ದಿವ್ಯಾಂಗರಿಗೆ ಮನೆಯಲ್ಲಿ ಮತದಾನ – ಡಿಸಿ

    April 15, 2024
    Share

    ಮಂಗಳೂರು:ದ.ಕ. ಲೋಕಸಭಾ ಕ್ಷೇತ್ರದಲ್ಲಿ 6,053 ಹಿರಿಯ ನಾಗರಿಕರು ಹಾಗೂ 1,957 ವಿಶೇಷ ಚೇತನರಿಗೆ ಅಂಚೆ ಮತ ಪತ್ರದ ಮೂಲಕ ಮತದಾನ ಪ್ರಕ್ರಿಯೆ ನಡೆಯಲಿದೆ ಎಂದು ಚುನಾವಣಾಧಿಕಾರಿಗಳೂ ಆಗಿರುವ ದ.ಕ. ಜಿಲ್ಲಾಧಿಕಾರಿ ಮುಟ್ಟೆ ಮುಗಿಲನ್ ಎಂ.ಪಿ. ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರಿಗೆ ಅಂಚೆ ಮತ ಪತ್ರದ ಮೂಲಕ ಮತದಾನ ಮಾಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಮಾಹಿತಿ ನೀಡುವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಭಾರತೀಯ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯಲ್ಲಿ 85 ವರ್ಷ ಮೇಲ್ಪಟ್ಟ 6,053 ಮತದಾರರಿಗೆ ಹಾಗೂ ಶೇ.40ಕ್ಕಿಂತ ಮೇಲ್ಪಟ್ಟು ಅಂಗವೈಕಲ್ಯ ಹೊಂದಿರುವ 1,957 ಮತದಾರರಿಗೆ ಮನೆಮನೆ ಭೇಟಿ ಮಾಡಿ ಅಂಚೆ ಮತ ಪತ್ರದ ಮೂಲಕ ಮತದಾನ ಸೌಲಭ್ಯ ಒದಗಿಸಿದೆ ಎಂದರು. ಅಂಚೆ ಮತಪತ್ರಗಳ ವಿತರಣೆಗಾಗಿ ಈಗಾಗಲೇ ಪೋಲಿಂಗ್ ಅಧಿಕಾರಿಗಳ ತಂಡ ರಚಿಸಲಾಗಿದ್ದು ಈ ತಂಡಗಳು ಕಾರ್ಯನಿವಹಿಸುವ ಬಗ್ಗೆ ನಿಗದಿಪಡಿಸಲಾದ ದಿನಾಂಕ, ಸಮಯದ ಬಗ್ಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಾಗೂ ಅಂಗವೈಕಲ್ಯ ಹೊಂದಿರುವ ದಿವ್ಯಾಂಗರ ಸಹಿತ 8,010 ಮತದಾರರು ಅಂಚೆ ಮತಪತ್ರದ ಮೂಲಕ ಮತದಾನದ ಸೌಲಭ್ಯ ಪಡೆಯಲಿದ್ದಾರೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಎ.15ರಿಂದ 17ರವರೆಗೆ 975 ಮತದಾರರಿಗೆ ಮತದಾನದ ಸೌಲಭ್ಯ ನೀಡಲು 25 ತಂಡಗಳನ್ನು ರಚಿಸಲಾಗಿದೆ. ಬೆಳ್ತಂಗಡಿ ವಿಧಾನಸಭಾ ಕ್ಷೇತದಲ್ಲಿ ಎ.15ರಿಂದ 16ರವರೆಗೆ ತನಕ 812 ಮತದಾರರಿಗೆ ಮತದಾನ ಸೌಲಭ್ಯ ನೀಡಲು 26 ತಂಡಗಳನ್ನು ರಚಿಸಲಾಗಿದೆ. ಮಂಗಳೂರು ವಿಧಾನಸಭಾ ಕ್ಷೇತದಲ್ಲಿ ಎ.15ರಿಂದ 16ರವರೆಗೆ 515 ಮತದಾರರಿಗೆ ಮತದಾನ ಸೌಲಭ್ಯ ನೀಡಲು 21 ತಂಡಗಳನ್ನು ರಚಿಸಲಾಗಿದೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತದಲ್ಲಿ ಎ.15ರಿಂದ 17ರವರೆಗೆ 1,401 ಮತದಾನದ ಸೌಲಭ್ಯ ನೀಡಲು 28 ತಂಡಗಳನ್ನು ರಚಿಸಲಾಗಿದೆ. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಎ.15ರಿಂದ 16ರವರೆಗೆ 976 ಮತದಾರರಿಗೆ ಮತದಾನ ಸೌಲಭ್ಯ ನೀಡಲು 26 ತಂಡಗಳನ್ನು ರಚಿಸಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಎ.15ರಿಂದ 17ರವರೆಗೆ 1,127 ಮತದಾರರಿಗೆ ಮತದಾನ ಸೌಲಭ್ಯ ನೀಡಲು 20 ತಂಡಗಳನ್ನು ರಚಿಸಲಾಗಿದೆ. ಸುಳ್ಯ ವಿಧಾನಸಭಾ ಕ್ಷೇತದಲ್ಲಿ ಎ.15ರಿಂದ 16ರವರೆಗೆ 1,038 ಮತದಾರರಿಗೆ ಮತದಾನದ ಸೌಲಭ್ಯ ನೀಡಲು 23 ತಂಡಗಳನ್ನು ರಚಿಸಲಾಗಿದೆ. ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಎ.15ರಿಂದ 17ರವರೆಗೆ 1,166 ಮತದಾರರಿಗೆ ಮತದಾನದ ಸೌಲಭ್ಯ ನೀಡಲು 22 ತಂಡಗಳನ್ನು ರಚಿಸಲಾಗಿದೆ. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್, ಅಂಚೆ ಮತಪತ್ರ ನೋಡಲ್ ಅಧಿಕಾರಿ ಪ್ರದೀಪ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

    Post Views: 191

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.