Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರವೀಣ್ ನೆಟ್ಟಾರ್ ಹಂತಕರಿಗೆ ಮತ್ತೊಮ್ಮೆ ಎಚ್ಚರಿಕೆ ಸಂದೇಶ
    ಇತ್ತೀಚಿನ ಸುದ್ದಿ

    ಪ್ರವೀಣ್ ನೆಟ್ಟಾರ್ ಹಂತಕರಿಗೆ ಮತ್ತೊಮ್ಮೆ ಎಚ್ಚರಿಕೆ ಸಂದೇಶ

    July 15, 2023
    Share

    ಸುಳ್ಯ: ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರುಹತ್ಯೆ ಪ್ರಕರಣದ ಆರೋಪಿಗಳು ಶರಣಾಗಬೇಕು ಎನ್ನುವ ಎಚ್ಚರಿಕೆಯ ಸಂದೇಶವನ್ನು ಸುಳ್ಯದಲ್ಲಿ ಮತ್ತೊಮ್ಮೆ ಎನ್‌ಐಎ (NIA) ಹೊರಡಿಸಿದೆ. ಇದು ತಲೆಮರೆಸಿಕೊಂಡಿರುವ ಹಂತಕರಿಗೆ ಎರಡನೇ ಎಚ್ಚರಿಕೆಯ ಸಂದೇಶವಾಗಿದೆ. ಈ ಎಚ್ಚರಿಕೆಗೂ ಬಗ್ಗದಿದ್ದರೆ ಮೂರನೇಯ ಎಚ್ಚರಿಕೆಯ ಸಂದೇಶವನ್ನು ಹೊರಡಿಸಲಾಗುತ್ತದೆ. ಆ ಎಚ್ಚರಿಕೆಯ ಸಂದೇಶದಲ್ಲೂ ಶರಣಾಗದೆ ಹೋದರೆ ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿಪಾಸ್ತಿಗಳನ್ನು ಎನ್‌ಐಎ ಮುಟ್ಟುಗೋಲು ಹಾಕಿಕೊಳ್ಳಲಿದೆ ಅನ್ನುವ ಮಾಹಿತಿ ಸಿಕ್ಕಿದೆ. ಆಗಸ್ಟ್‌ 18ರೊಳಗೆ ಶರಣಾಗಲೇಬೇಕು ಎಂದು ಸೂಚಿಸಿದೆ. ಈ ಹಿಂದೆ ಜೂ.30ರೊಳಗೆ ಶರಣಾಗಬೇಕು. ಇಲ್ಲದೇ ಹೋದಲ್ಲಿ ಅವರ ಮನೆಯನ್ನು ಜಪ್ತಿ ಮಾಡುವುದಾಗಿ ಎನ್‌ಐಎ(NIA) ಅಧಿಕಾರಿಗಳು ಧ್ವನಿ ವರ್ಧಕದ ಮೂಲಕ ತಿಳಿಸಿದ್ದರು. ಆದರೆ ಇದುವರೆಗೆ ಪ್ರವೀಣ್ ನೆಟ್ಟಾರು ಹಂತಕರು ಶರಣಾಗಿರಲಿಲ್ಲ. ಇದಕ್ಕೆ ಸಂಬಂಧಿಸಿದಂತೆ ಎರಡು ವಾರಗಳ ಹಿಂದೆ ಎನ್‌ಐಎ ಅಧಿಕಾರಿಗಳು ಸುಳ್ಯ ನಗರದಲ್ಲಿ ಸಾರ್ವಜನಿಕವಾಗಿ ಧ್ವನಿವರ್ಧಕದ ಮೂಲಕ ಅನೌನ್ಸ್‌ ಮಾಡುತ್ತಿದ್ದು, ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ. ಸುಳ್ಯದ (Sullia) ಕಲ್ಲುಮುಟ್ಲುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ ಬರಲಾಗಿದೆ. ಜೊತೆಗೆ ಬೆಳ್ಳಾರೆಯಲ್ಲಿಯೂ ಧ್ವನಿವರ್ಧಕದ ಮೂಲಕ ಎನ್‌ಐಎ ನ್ಯಾಯಾಲಯದ ಆದೇಶವನ್ನು ಉದ್ಘೋಷಣೆ ಮಾಡಿ ಆರೋಪಿ ಮುಸ್ತಫರವರ ಮನೆಗೂ ಹೋಗಿ ಆದೇಶ ಪ್ರತಿ ಅಂಟಿಸಿ ಬಂದಿದ್ದರು. ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ(Bellare) ಸಮೀಪ ಪ್ರವೀಣ್ ನೆಟ್ಟಾರು ಅವರನ್ನು ಭೀಕರವಾಗಿ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿತ್ತು.

    Post Views: 221

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.