Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕುಡಿಯುವ ನೀರು ಪೂರೈಕೆಗೆ ಸೂಕ್ತ ಕ್ರಮ ವಹಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಕುಡಿಯುವ ನೀರು ಪೂರೈಕೆಗೆ ಸೂಕ್ತ ಕ್ರಮ ವಹಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

    May 4, 2024
    Share

    ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮ ವಹಿಸಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧಿಕಾರಿಗಳಿಗೆ ಸೂಚಿಸಿದರು.

    ನಗರದ ಲಾಲ್‌ಬಾಗ್‌ನಲ್ಲಿರುವ ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಶುಕ್ರವಾರ ನಡೆದ ದ.ಕ.ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ನೀರಿನ ಅನಗತ್ಯ ಬಳಕೆಗೆ ಕಡಿವಾಣ ಹಾಕುವುದು ಅನಿವಾರ್ಯವಾಗಿದೆ. ಹಾಗಾಗಿ ನೀರನ್ನು ಯಾರೂ ಅನಗತ್ಯವಾಗಿ ಪೋಲು ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಮತ್ತು ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.

    ಮಳೆಯ ಕೊರತೆ, ತಾಪಮಾನ ಹೆಚ್ಚಳದಿಂದಾಗಿ ನೀರಿನ ಸಮಸ್ಯೆ ಪ್ರಾರಂಭವಾಗುತ್ತಿದೆ. ಸಾರ್ವಜನಿಕರು ಅನಗತ್ಯವಾಗಿ ನೀರು ಪೋಲು ಮಾಡದೇ ಸದ್ಭಳಕೆ ಮಾಡಬೇಕು. ನೀರಿನ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಈಗಾಗಲೇ ನೀರಿನ ಸಮಸ್ಯೆ ಪರಿಹರಿಸಲು ಕಂಟ್ರೋಲ್ ರೂಮ್‌ಗಳನ್ನು ತೆರೆಯಲಾಗಿದೆ. ನೀರಿನ ರೇಷನಿಂಗ್ ಮಾಡಲು ಸೂಕ್ತ ವೇಳಾಪಟ್ಟಿಯನ್ನು ತಯಾರಿಸಿ ಸಮರ್ಪಕವಾಗಿ ಎಲ್ಲಾ ಕಡೆ ನೀರು ಪೂರೈಕೆಯಾಗುವಂತೆ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ಮಹಾನಗರ ಪಾಲಿಕೆಯ ಆಯುಕ್ತರಿಗೆ ಸೂಚಿಸಿದರು.

    ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರ್ ಹಾಗೂ ಕಾರ್ಯನಿರ್ವಹಕ ಅಧಿಕಾರಿಗಳು ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಮ್ ಸ್ಥಾಪಿಸಿ ನೀರಿನ ಸಮಸ್ಯೆಗಳ ಬಗ್ಗೆ ಕ್ರಮಕೈಗೊಳ್ಳಬೇಕು. ಡ್ಯಾಮ್‌ಗಳನ್ನು ಹೊರತುಪಡಿಸಿ ನೀರಿನ ಪರ್ಯಾಯ ಮೂಲಗಳನ್ನು ಖುದ್ದಾಗಿ ಭೇಟಿ ನೀಡಿ ಅದರ ಬಗ್ಗೆ ಪಟ್ಟಿ ತಯಾರಿಸಬೇಕು ಎಂದರು.

    ನೀರಿನ ಸಮಸ್ಯೆ ಎದುರಾಗಿರುವ ಸೋಮೇಶ್ವರ ಹಾಗೂ ಕೋಟೆಕಾರು ಪ್ರದೇಶಗಳಲ್ಲಿ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಆಗುತ್ತಿದೆ. ಆ ಬಗ್ಗೆಯೂ ಗಮನಹರಿಸಬೇಕು. ಮಳೆಗಾಲದವರೆಗೆ ಯಾವುದೇ ರೀತಿಯ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮವಹಿಸಬೇಕು ಎಂದರು.

    ಅಗ್ನಿಶಾಮಕ ದಳ, ಅರಣ್ಯ ಇಲಾಖೆ, ಮೆಸ್ಕಾಂ, ಆರೋಗ್ಯ ಇಲಾಖೆಗಳೂ ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ತಯಾರಾಗಿರಬೇಕು. ಮಳೆಗಾಲ ಆಗಮಿಸುವ ಮೊದಲೇ ಯಾವೆಲ್ಲಾ ಪ್ರದೇಶಗಳಲ್ಲಿ ಭೂಕುಸಿತ, ಪ್ರವಾಹ ಹಾಗೂ ಸಂಪರ್ಕಕ್ಕೆ ಸಿಗದೆ ಇರುವ ಪ್ರದೇಶಗಳ ಬಗ್ಗೆ ಮಾಹಿತಿ ಕಲೆ ಹಾಕಬೇಕು ಹಾಗೂ ಯಾವುದೇ ರೀತಿಯ ಹಾನಿ ಉಂಟಾಗ ದಂತೆ ಎಲ್ಲಾ ರೀತಿಯ ರಕ್ಷಣಾ ವ್ಯವಸ್ಥೆಗಳನ್ನು ಮಾಡಿಕೊಂಡಿರಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

    ಪ್ರವಾಹ ಸಂಭವಿಸುವಂತಹ ಪ್ರದೇಶದಲ್ಲಿ ಜನರನ್ನು ಒಂದು ಕಡೆಯಿಂದ ಇನ್ನೊಂದು ಕಡೆಗೆ ಸಾಗಿಸಲು ಬೇಕಾದಂತಹ ಬೋಟ್ ವ್ಯವಸ್ಥೆ ಹಾಗೂ ನಿರಾಶ್ರಿತರು ಉಳಿದುಕೊಳ್ಳುವಂತಹ ಶಿಬಿರಗಳಲ್ಲಿ ಯಾವುದೇ ರೀತಿಯ ಮೂಲಭೂತ ಸೌಲಭ್ಯಗಳ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.

    ರಸ್ತೆ ಕಡಿತಗೊಂಡು ಸಂಪರ್ಕಕ್ಕೆ ಸಿಗದ ಪ್ರದೇಶದಲ್ಲಿ ಗರ್ಭಿಣಿಯರು ಮತ್ತು ವಯಸ್ಸಾದವರ ಪಟ್ಟಿಯನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ತಿಳಿಸಿದ ಡಿಸಿ ಅರ್ಹರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ವ್ಯವಸ್ಥೆ ಮಾಡಬೇಕು ಎಂದರು.

    ನೆಟ್‌ವರ್ಕಗಳು ಸಿಗದಂತಹ ಪ್ರದೇಶದಲ್ಲಿ ಜನರಿಂದ ಮಾಹಿತಿ ಪಡೆಯಲು ಮತ್ತು ಅವರಿಗೆ ಸೂಕ್ತ ಮಾಹಿತಿಯನ್ನು ನೀಡಲು ಪರ್ಯಾಯ ವ್ಯವಸ್ಥೆಗೆ ಕ್ರಮವಹಿಸಲು ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.

    Post Views: 170

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.