ಮಂಗಳೂರು: ಬೆಸಿಗೆ ಜೊತೆಗೆ ಮಳೆ ಬಾರದ ಕಾರಣ ತುಂಬೆ ಡ್ಯಾಂ ನಲ್ಲಿ ನೀರಿನ ಮಟ್ಟ ತೀವ್ರ ಕುಸಿತಗೊಂಡಿದ್ದು ಇದೀಗ ಮಂಗಳೂರು ನಗರಕ್ಕೆ ನೀರು ಪೂರೈಕೆಯಲ್ಲಿ ಸಮಸ್ಯೆಯಾಗಲಾರಂಭಿಸಿದೆ. ಈ ಹಿನ್ನಲೆ (ಮೇ 4) ರಿಂದ ಮಂಗಳೂರು ನಗರ ವ್ಯಾಪ್ತಿಯಲ್ಲಿ ರೇಷನಿಂಗ್ ಮೂಲಕ ನೀರಿನ ಪೂರೈಕೆ ಮಾಡಲಾಗುವುದು ಎಂದು ಜಿಲ್ಲಾಡಳಿತ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ತುಂಬೆ ಡ್ಯಾಂನಲ್ಲಿ ಲಭ್ಯವಿರುವ ನೀರನ್ನು ಮಂಗಳೂರು ನಗರ ಪ್ರದೇಶಕ್ಕೆ (ಮಂಗಳೂರು ನಗರ ದಕ್ಷಿಣ) ಮತ್ತು ಸುರತ್ಕಲ್ (ಮಂಗಳೂರು ಉತ್ತರ) ಭಾಗಕ್ಕೆ ʻಪರ್ಯಾಯ ದಿನʼಗಳಲ್ಲಿ ನೀರು ಬಿಡಲು ಸೂಚಿಸಲಾಗಿದೆ.
ಈ ಸೂಚನೆಯಂತೆ ದಿನಾಂಕ 05- 05- 2023 ರಂದು ಮಂಗಳೂರು ನಗರ ಉತ್ತರಕ್ಕೆ, ದಿನಾಂಕ 06-05-2023 ರಂದು ಮಂಗಳೂರು ನಗರ ದಕ್ಷಿಣ ಹೀಗೆ ಕ್ರಮಾನುಗತವಾಗಿ ಈ ಮೇಲೆ ತಿಳಿಸಿದಂತೆ ನೀರು ಪೂರೈಕೆ ಮಾಡಲು ನಿರ್ಧರಿಸಲಾಗಿದೆ.
ಲಭ್ಯವಿರುವ ನೀರನ್ನು ಈ ರೀತಿಯಾಗಿ ಪೂರೈಕೆ ಮಾಡುವುದು ಅನಿವಾರ್ಯವಾಗಿದ್ದು ಸಾರ್ವಜನಿಕರು ನಗರ ಪಾಲಿಕೆಯೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.