ಬೆಳ್ತಂಗಡಿ: ಮೀನು ಹಿಡಿಯಲು ತೆರಳಿದ್ದ ವ್ಯಕ್ತಿಯೊಬ್ಬರು ನದಿಗೆ ಬಿದ್ದು ಮೃತಪಟ್ಟ ಘಟನೆ ಕಲ್ಮಂಜ ಗ್ರಾಮದ ನೇತ್ರಾವತಿ ನದಿಯ ನೇರೊಳ್ ಪಲ್ಕೆ ಎಂಬಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ಕುಲೆಂಜಿಲೋಡಿಯ ಕೇಶವ ಗೌಡ(65)ಎಂದು ಗುರುತಿಸಲಾಗಿದೆ. ಕೇಶವ ಗೌಡ ಗುರುವಾರ ರಾತ್ರಿ ಮೀನು ಹಿಡಿಯಲು ಹೋಗಿದ್ದು, ಶುಕ್ರವಾರ ಬೆಳಗ್ಗೆ ಅವರ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.