Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಕಾರನ್ನು ಅಡ್ಡಗಟ್ಟಿ ಚಾಲಕ, ಮಹಿಳೆಯರಿಗೆ ತಂಡದಿಂದ ಹಲ್ಲೆ – ದೂರು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಕಾರನ್ನು ಅಡ್ಡಗಟ್ಟಿ ಚಾಲಕ, ಮಹಿಳೆಯರಿಗೆ ತಂಡದಿಂದ ಹಲ್ಲೆ – ದೂರು

    May 20, 2024
    Share

    ಬೆಳ್ತಂಗಡಿ: ಬೈಕಿನಲ್ಲಿ ಆಗಮಿಸಿದ ತಂಡವೊಂದು ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಧರ್ಮಸ್ಥಳದ ಕನ್ಯಾಡಿಯಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ನಿವಾಸಿಗಳಾದ ಅಬ್ದುಲ್ ಫಾರೂಕ್, ಮೈಮುನಾ, ಸೌಧಾ, ಮೈಮುನಾ ಸಿದ್ದಿಕ್ ಹಾಗೂ ಮಕ್ಕಳು ಉಜಿರೆಯ ಸಂಬಂಧಿಕರ ಮನೆಗೆ ಹೋಗಿ ರಾತ್ರಿ 11:30ರ ಸುಮಾರಿಗೆ ಧರ್ಮಸ್ಥಳಕ್ಕೆ ಹಿಂತಿರುಗುತ್ತಿದ್ದ ವೇಳೆ ಕನ್ಯಾಡಿ ಶಾಲೆಯ ಸಮೀಪ ಎರಡು ಬೈಕ್‌ಗಳಲ್ಲಿ ಬಂದ ಮೂವರು ಕಾರನ್ನು ತಡೆದು ಕಾರು ಚಾಲಕನಿಗೆ ಹಲ್ಲೆ ನಡೆಸಿ ಕಾರಿನ ಕೀಯನ್ನು ಕಸಿದುಕೊಂಡಿದ್ದಾರೆ. ಕಾರಿನ ಇನ್ನೊಂದು ಬದಿಯ ಡೋ‌ರ್ ನ್ನು ಬಲವಂತವಾಗಿ ತೆರೆದ ಆರೋಪಿಗಳು ಮಹಿಳೆಯರ ಮೇಲೆ ಕೈಮಾಡಿ ಮಾನಕ್ಕೆ ಕುಂದುಂಟಾಗುವ ರೀತಿಯಲ್ಲಿ ವರ್ತಿಸಿದ್ದಲ್ಲದೆ ಕಾರಿನಲ್ಲಿದ್ದವರ ಕೈಯಲ್ಲಿದ್ದ ಮೊಬೈಲ್‌ನ್ನು ಕಸಿದುಕೊಂಡು ಎಸೆದು ಹಾನಿಗೊಳಿಸಿದ್ದಾರೆ. ಈ ವೇಳೆ ಕಾರಿನಲ್ಲಿದ್ದವರು ಬೊಬ್ಬೆ ಹಾಕಿದ್ದು ದಾರಿಯಲ್ಲಿ ಬಂದ ಪರಿಚಯದವರು ವಾಹನ ನಿಲ್ಲಿಸಿ ಜಗಳ ಬಿಡಿಸಿದ್ದಾರೆ.” ಈ ವೇಳೆ ಮೂವರು ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಪೊಲೀಸರಿಗೆ ದೂರು ನೀಡಿದರೆ ಕೊಲ್ಲದೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿ ಪರಾರಿಯಾಗಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಇದೀಗ ಘಟನೆಯ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

    Post Views: 188

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.