Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIG NEWS: ಹಾಸನದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಕೋರ್ಟ್ ಆವರಣದಲ್ಲೇ ಪತಿಯಿಂದ ಪತ್ನಿಗೆ ಚಾಕು ಇರಿತ
    ಇತ್ತೀಚಿನ ಸುದ್ದಿ

    BIG NEWS: ಹಾಸನದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಕೋರ್ಟ್ ಆವರಣದಲ್ಲೇ ಪತಿಯಿಂದ ಪತ್ನಿಗೆ ಚಾಕು ಇರಿತ

    August 13, 2022
    Share

    ಹಾಸನ: ದಂಪತಿಗಳ ನಡುವೆ ವೈಮನಸ್ಸು ಉಂಟಾಗಿ, ಆ ಬಳಿಕ ಕೋರ್ಟ್ ಆವರಣದಲ್ಲಿ ನಡೆದಂತ ಲೋಕ ಅಧಾಲತ್ ನಲ್ಲಿ ಒಟ್ಟಿಗೆ ಜೊತೆಯಾಗಿದ್ದು, ಇಬ್ಬರು ಸಂಸಾರ ಮಾಡುತ್ತೇವೆ ಎಂಬುದಾಗಿ ಪತಿ ಒಪ್ಪಿಕೊಂಡಿದ್ದರು. ಆದ್ರೇ.. ಕೋರ್ಟ್ ಆವರಣದ ಶೌಚಾಲಯದಲ್ಲೇ ಪತ್ನಿಯ ಕತ್ತು ಕೊಯ್ದು, ಮಗುವನ್ನು ಕೊಲ್ಲಲು ಯತ್ನಿಸಿದಂತ ಘಟನೆ ನಡೆದಿತ್ತು.

    ಇದೀಗ ಪತಿಯಿಂದ ಹತ್ಯೆ ಯತ್ನದಲ್ಲಿ ಗಾಯಗೊಂಡಿದ್ದಂತ ಪತ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

    ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಗ್ರಾಮದ ಶಿವಕುಮಾರ್ ಹಾಗೂ ಚೈತ್ರಾ ಕಳೆದ 6 ವರ್ಷಗಳ ಹಿಂದೆ ವಿವಾಹವಾಗಿದ್ದರು. ಕೆಲ ವರ್ಷಗಳಿಂದ ದಂಪತಿಗಳ ನಡುವೆ ವೈಮನಸ್ಸು ಮೂಡಿ, ದೂರಾಗಿದ್ದರು. ಇದೇ ಕಾರಣದಿಂದಾಗಿ ಪತ್ನಿ ಚೈತ್ರಾ ಡೈವೋರ್ಸ್ ಗಾಗಿ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು.

    ಹೊಳೆನರಸೀಪುರದ ಹಿರಿಯ ಸಿವಿಲ್ ಕೋರ್ಟ್ ನಲ್ಲಿ ನಡೆದಿದ್ದಂತ ಲೋಕ ಅಧಾಲತ್ ನಲ್ಲಿ ಭಾಗವಹಿಸಿದ್ದಂತ ಶಿವಕುಮಾರ್ ಹಾಗೂ ಚೈತ್ರ ಅವರನ್ನು ಒಟ್ಟಿಗೆ ಇರೋದಕ್ಕೆ ಮನವೊಲಿಸಲಾಗಿತ್ತು. ಅಂತಿಮವಾಗಿ ಶಿವಕುಮಾರ್ ಒಟ್ಟಿಗೆ ಇರುತ್ತೇವೆ. ಇನ್ಮುಂದೆ ಪತ್ನಿ ಚೈತ್ರಾಳನ್ನು ಹಾಗೂ ಮಗುವನ್ನು ಚೆನ್ನಾಗಿ ನೋಡಿಕೊಳ್ಳೋದಾಗಿಯೂ ಒಪ್ಪಿಕೊಂಡಿದ್ದರು.

    ಕೋರ್ಟ್ ನ ನ್ಯಾಯಾಧೀಶೆ ಹಾಗೂ ವಕೀಲರ ಮುಂದೆ ಚೆನ್ನಾಗಿ ನೋಡಿಕೊಳ್ಳುವುದಾಗಿ, ಪತ್ನಿ, ಮಕ್ಕಳ ಜೊತೆ ಜೀವನ ನಡೆಸುವುದಾಗಿ ಹೇಳಿದ್ದರು. ಕೋರ್ಟ್ ನಿಂದ ಹೊರ ಬಂದ ಬಳಿಕ ಶೌಚಾಲಯಕ್ಕೆ ತೆರಳಿದ್ದಂತ ಪತ್ನಿಯನ್ನು ಹಿಂಬಾಲಿಸಿಕೊಂಡು ಹೋಕಿ ಚಾಕುವಿನಿಂದ ಕತ್ತುಕೊಯ್ದಿದ್ದರು. ಆ ನಂತ್ರ ಮಗುವನ್ನು ಹತ್ಯೆಗೆ ಯತ್ನಿಸಿದಂತ ವೇಳೆಯಲ್ಲಿ ಸ್ಥಳೀಯರು ತಡೆದಿದ್ದು, ಆರೋಪಿ ಶಿವಕುಮಾರ್ ನನ್ನು ಪೊಲೀಸರಿಗೆ ಹಿಡಿದುಕೊಟ್ಟಿದ್ದರು.

    ಪತ್ನಿಯ ಚಾಕು ಇರಿತಕ್ಕೆ ಒಳಗಾಗಿದ್ದಂತ ಚೈತ್ರಾ(32) ಅವರನ್ನು ಕೂಡಲೇ ಹಾಸನದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದ್ರೇ.. ಹಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಚೈತ್ರಾ ಇದೀಗ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವಂತ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

    Post Views: 220

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.