ಮಂಗಳೂರು: ವಿ.ಕೆ ಫಿಲ್ಸ್ ತನ್ನ ಎರಡನೇ ದೊಡ್ಡ ಪ್ರಾಜೆಕ್ಟ್ “ವೈಲ್ಡ್ ಟೈಗರ್ ಸಫಾರಿ” ಚಲನಚಿತ್ರವನ್ನು ಘೋಷಿಸಿದೆ. ಈ ಸಂಸ್ಥೆಯ ಮೊದಲ ಚಿತ್ರ”ಕರಾವಳಿ” ಆಗಿದ್ದು, ಅದರಲ್ಲಿ ಶಿಥಿಲ್ ಪೂಜಾರಿ ಮುಖ್ಯ ಪಾತ್ರನಿರ್ವಹಿಸಿದ್ದರು. ಈ ಹೊಸ ಸಿನಿಮಾ ವಿನೋದ್ ಕುಮಾರ್ ಅವರ
ಪ್ರೊಡಕ್ಷನ್ ಅಡಿಯಲ್ಲಿ ಮೂಡಿ ಬರುತ್ತಿದ್ದು, ಅವರು ಸಿನಿಮಾ ಕ್ಷೇತ್ರದ ಬಗ್ಗೆ ಅಪಾರವಾದ ಆಸಕ್ತಿಯನ್ನು ಹೊಂದಿದ್ದಾರೆ.
ಶಿಥಿಲ್ ಪೂಜಾರಿ ಅವರು “ಕರಾವಳಿ” ಸಿನಿಮಾದಲ್ಲಿ ನೆಗೆಟಿವ್ ಶೇಡ್ ಪಾತ್ರ ಮಾಡಿದ್ದು, 2019ರಲ್ಲಿ Mr. MH International UAE ಹಾಗೂ
Mr. Billava ಪ್ರಶಸ್ತಿಗಳನ್ನು ಗೆದ್ದಿದ್ದಾರೆ.
ಧರ್ಮೇಶ್ ಯೆಲಂದೆ ಅವರು ಭಾರತದ ಪ್ರಸಿದ್ಧ ನೃತ್ಯಗಾರ ಹಾಗೂ ಕೊರಿಯೋಗ್ರಾಫರ್ ಆಗಿದ್ದಾರೆ.
ಸುಶಾಂತ್ ಪೂಜಾರಿ “ABCD” ಮತ್ತು ಇತರೆ ಸಿನಿಮಾದಲ್ಲಿ ನಟಿಸಿದ್ದರು ಹಾಗೂ ಒಬ್ಬ ನೃತ್ಯಗಾರ.
ನಿಮಿಕಾ ರತ್ನಾಕರ್ “Shake It Pushpavathi” ಗೀತೆಯಿಂದ ಖ್ಯಾತಿಯನ್ನು ಗಳಿಸಿದವರು. ಅವರು ನಟಿಯಾಗಿದ್ದು ಮಾತ್ರವಲ್ಲ,
ಗಾಯಕಿ ಹಾಗೂ Miss India Super Talent ನಲ್ಲಿ ಬಾಗಿಯಾಗಿದ್ದಾರೆ.
ಅಚೂತ್ ರಾವ್ ತಮ್ಮ ವಿಭಿನ್ನ ಅಭಿನಯ ಶೈಲಿಗೆ ಪ್ರಸಿದ್ಧ. ಮತ್ತು ಯಶ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತಯಾರಾಗಲಿರುವ ”ವೈಲ್ಡ್ ಟೈಗರ್ ಸಫಾರಿ“ ಸಿನಿಮಾದ ಮುಹೂರ್ತ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಕದ್ರಿ ದೇವಸ್ಥಾನದಲ್ಲಿ ಜರುಗಿತು.

ಬಳಿಕ ಮಾಧ್ಯಮಗಳ ಜೊತೆ ಮಾತಾಡಿದ ಚಿತ್ರದ ನಿರ್ದೇಶಕ ಚಂದ್ರಮೌಳಿ ಅವರು, ”ಕ್ಷಣಕ್ಷಣಕ್ಕೂ ಕುತೂಹಲ ಕೆರಳಿಸುವ ಕಥಾಹಂದರವನ್ನು ಈ ಸಿನಿಮಾ ಹೊಂದಿದ್ದು ಸಿನಿಮಾದ ಮುಹೂರ್ತ ಕಾರ್ಯಕ್ರಮ ಇಂದು ನಡೆದಿದೆ. ಮಂಗಳೂರು ಮೂಲದ ಕಥೆಯಲ್ಲಿ ಹುಲಿ ವೇಷಕ್ಕೆ ಪ್ರಾಧಾನ್ಯತೆ ಇರಲಿದೆ. ಮುಂದೆ ಸಿನಿಮಾದ ಚಿತ್ರೀಕರಣ ಆರಂಭಗೊಳ್ಳಲಿದ್ದು ಶೀಘ್ರದಲ್ಲಿ ಸಿನಿಮಾ ತೆರೆಗೆ ಬರಲಿದೆ“ ಎಂದರು.
ಬಳಿಕ ಮಾತಾಡಿದ ನಾಯಕ ನಟ ಶಿಥಿಲ್ ಕುಮಾರ್, ”ಸಿನಿಮಾಕ್ಕೆ ಬೇಕಾಗಿ ಸಾಕಷ್ಟು ಸಿದ್ಧತೆಯನ್ನು ಮಾಡಿಕೊಂಡಿದ್ದೇನೆ. ಲವ್, ಆಕ್ಷನ್ ಸಿನಿಮಾ ಇದಾಗಿದ್ದು ವೀಕ್ಷಕರಿಗೆ ಮನೋರಂಜನೆ ಬೇಕಾದ ಎಲ್ಲವನ್ನು ಒಳಗೊಂಡಿದೆ. ಕಥೆ ಕೇಳಿ ಥ್ರಿಲ್ ಆಗಿದ್ದೇನೆ“ ಎಂದರು. ರಾಜೇಶ್ ಭಟ್ ಸಿನಿಮಾಕ್ಕೆ ಕೆಮರಾ ಕ್ಲಾಫ್ ಮಾಡಿದರು. ಸಿನಿಮಾ ನಿರ್ಮಾಪಕ ವಿನೋದ್ ಕುಮಾರ್, ನಾಯಕಿ ನಿಮಿಕಾ ರತ್ನಾಕರ್, ಬಾಲಿವುಡ್ ನ ಖ್ಯಾತ ನೃತ್ಯ ನಿರ್ದೇಶಕರಾದ ಧರ್ಮೇಶ್, ಸುಶಾಂತ್, ಕೆಮರಾಮ್ಯಾನ್ ಎಜೆ ಶೆಟ್ಟಿ, ಕಲಾ ನಿರ್ದೇಶಕ ಶಿವು, ದೇವಳದ ಮೆನೇಜರ್ ಜಗದೀಶ್ ಕದ್ರಿ, ಕಿಶೋರ್ ಕುಮಾರ್, ರತ್ನಾಕರ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.