ಕಡಬ ಸಮೀಪ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕಾಣಿಯೂರಿನಲ್ಲಿ ನಡೆದಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಮೃತಪಟ್ಟವರು ಕಾಣಿಯೂರು ಗ್ರಾಮದ ಅನಿಲ ಮನೆ ಪದ್ಮಯ್ಯ ಗೌಡ ಅವರ ಪುತ್ರಿ ದಿವ್ಯಾ ಶ್ರೀ(26) ಎಂದು ಗುರುತಿಸಲಾಗಿದೆ.
ತಮ್ಮ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದು, ತಕ್ಷಣ ಗಮನಿಸಿದ ಮನೆಯವರು ಆಸ್ಪತ್ರೆಗೆ ದಾಖಲಿಸಿದರೂ ಯುವತಿ ಮೃತಪಟ್ಟರೆನ್ನಲಾಗಿದೆ. ಮೇಲ್ನೋಟಕ್ಕೆ ಅಪಪ್ರಚಾರಕ್ಕೆ ಮನನೊಂದು ಯುವತಿ ಜೀವಾಂತ್ಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಯುವತಿಯ ತಂದೆ ಪದ್ಮಯ್ಯ ಗೌಡ ಅನಿಲ ಎಂಬವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.