Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ರೈಲಿನಲ್ಲಿ ಮಹಿಳೆಯ ಬ್ಯಾಗ್‌ ಕದ್ದ ಕಳ್ಳನ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ : ರೈಲಿನಲ್ಲಿ ಮಹಿಳೆಯ ಬ್ಯಾಗ್‌ ಕದ್ದ ಕಳ್ಳನ ಬಂಧನ

    October 6, 2023
    Share

    ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ ಕಿತ್ತುಕೊಂಡು ಪರಾರಿಯಾಗಿದ್ದ ಕಳ್ಳನನ್ನು ರೈಲ್ವೆ ಪೊಲೀಸರು ದೂರು ದಾಖಲಾದ ನಾಲ್ಕೇ ತಾಸಿನೊಳಗೆ ಬಂಧಿಸಿದ್ದಾರೆ. ದಿಲ್ಲಿಯ ನಿವಾಸಿ ಸನ್ನಿ ಮಲ್ಹೋತ್ರಾ (30) ಬಂಧಿತ ಆರೋಪಿಯಾಗಿದ್ದಾನೆ.

    ಮಹಿಳೆಯ ಬ್ಯಾಗಿನಲ್ಲಿ ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳಿದ್ದವು. ಕಳ್ಳನ ಬಳಿ 6,75,000 ರೂ. ಮೌಲ್ಯದ 93.17 ಗ್ರಾಂ ತೂಕದ ನಾಲ್ಕು ಚಿನ್ನದ ಸರಗಳು, 3,700 ರೂ ನಗದು ಮತ್ತು ಎಟಿಎಂ ಕಾರ್ಡ್ ದೊರೆತಿದೆ.

    ನೇತ್ರಾವತಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಲ್ಯಾಣಿ ಬಾಲಕೃಷ್ಣನ್ ಎಂಬ ಮಹಿಳೆ ಬುಧವಾರ S7 ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಅವರ ಬ್ಯಾಗ್‌ ತೋಕೂರು ನಿಲ್ದಾಣದ ಬಳಿ ಕಳ್ಳತನವಾಗಿತ್ತು. ಈ ಕುರಿತು ಅವರು ರೈಲ್ವೆ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಪ್ರಾರಂಭಿಸಿದ ಪೊಲೀಸರಿಗೆ ಉಡುಪಿ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಕುಲಿತಿರುವುದು ಕಂಡು ಬಂದಿದೆ.

    ಅವನನ್ನು ಹಿಡಿದು ವಿಚಾರಣೆ ನಡೆಸಿದಾಗ ಆತನೇ ಕಳ್ಳ ಎಂದು ಖಾತರಿಯಾಗಿದ್ದು ಕದ್ದ ಚಿನ್ನಾಭರಣಗಳೂ ಅವನ ಬಳಿಯಿದ್ದವು.

    ಮಡಗಾಂವ್‌ಗೆ ಪ್ರಯಾಣಿಸಲು ಟಿಕೆಟ್‌ ತೆಗೆದಿದ್ದ ಆತ ಮಹಿಳೆಯ ಬ್ಯಾಗ್‌ ಕದ್ದು ತೋಕೋರಿನಲ್ಲಿ ರೈಲು ನಿಧಾನವಾದಾಗ ಇಳಿದು ಮತ್ತೊಂದು ರೈಲು ಹತ್ತಿ ಉಡುಪಿ ನಿಲ್ದಾಣ ಬಂದಿಳಿದಿದ್ದ.

    ಇಲ್ಲಿಂದ ವಾಪಸ್‌ ಕೇರಳದತ್ತ ಹೋಗುವ ರೈಲು ಏರುವ ಸಿದ್ದತೆಯಲ್ಲಿದ್ದ. ಬ್ಯಾಗನ್ನು ಪೊದೆಗೆ ಎಸೆದು ಅದರಲ್ಲಿದ್ದ ಚಿನ್ನ, ನಗದು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ತನ್ನ ಬ್ಯಾಗಿಗೆ ಹಾಕಿಕೊಂಡಿದ್ದ.

    Post Views: 173

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.