Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೂವರು ಪಾಕಿಸ್ತಾನ ಪ್ರಜೆಗಳ ವಾಸ್ತವ್ಯ
    ಇತ್ತೀಚಿನ ಸುದ್ದಿ

    ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೂವರು ಪಾಕಿಸ್ತಾನ ಪ್ರಜೆಗಳ ವಾಸ್ತವ್ಯ

    April 26, 2025
    Share

    ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೂರು ಮಂದಿ ಪಾಕಿಸ್ಥಾನಿ ಮಹಿಳೆಯರು ವಾಸ್ತವ್ಯವಿರುವುದು ಪೊಲೀಸ್ ಪರಿಶೀಲನೆ ವೇಳೆ ಪತ್ತೆಯಾಗಿದೆ. ಆದರೆ ಇವರು 12-13 ವರ್ಷಗಳ ಹಿಂದೆಯೇ ಮಂಗಳೂರಿಗೆ ಬಂದು ವಾಸ್ತವ್ಯ ಹೂಡಿ ಭಾರತೀಯ ಪ್ರಜೆಗಳನ್ನು ಮದುವೆಯಾಗಿದ್ದಾರೆ.

    ಈ ಪೈಕಿ ಒಬ್ಬರು ನಗರದ ಫಳ್ನೀರ್, ಇನ್ನೊಬ್ಬರು ವಾಮಂಜೂರಿನಲ್ಲಿ ನೆಲೆಸಿದ್ದಾರೆ. ಇನ್ನೊಬ್ಬ ಮಹಿಳೆಯ ವಾಸಸ್ಥಳದ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಈಗಾಗಲೇ ರಾಜ್ಯ ಸರಕಾರಕ್ಕೆ ಮಾಹಿತಿ ರವಾನೆ ಮಾಡಲಾಗಿದೆ. ಸರಕಾರದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸದ್ಯ ಯಾವುದೇ ಪಾಕಿಸ್ಥಾನಿ ನಾಗರಿಕರು ಪತ್ತೆಯಾಗಿಲ್ಲ ಎಂದು ಎಸ್ಪಿ ತಿಳಿಸಿದ್ದಾರೆ. ಇನ್ನು ಉಡುಪಿ ಜಿಲ್ಲೆಯಲ್ಲಿ ಯಾವುದೇ ಪಾಕಿಸ್ತಾನಿ ಪ್ರಜೆಗಳು ಪತ್ತೆಯಾಗಿಲ್ಲ ಎಂದು ಉಡುಪಿ ಎಸ್ಪಿ ಮಾಹಿತಿ ನೀಡಿದ್ದಾರೆ.

    ಎಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿ 26 ಮಂದಿ ಸಾವಿಗೆ ಕಾರಣರಾಗಿದ್ದರು. ಈ ಹಿನ್ನಲೆ ಕೇಂದ್ರ ಸರಕಾರ ಪಾಕಿಸ್ತಾನದ ಮೇಲೆ ರಾಜತಾಂತ್ರಿಕ ನಿರ್ಬಂಧಗಳನ್ನು ಹೇರಿದ್ದು, ದೇಶದಲ್ಲಿ ಇರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳು ದೇಶ ತೊರೆಯುವಂತೆ 48 ಗಂಟೆಗಳ ಗಡುವನ್ನು ನೀಡಿತ್ತು.
    ಅಲ್ಲದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಲ್ಲಾ ರಾಜ್ಯಗಳ ಸಿಎಂ ಗಳಿಗೆ ರಾಜ್ಯದಲ್ಲಿ ಯಾವುದೇ ಪಾಕಿಸ್ತಾನದ ಪ್ರಜೆಗಳು ಉಳಿಯದಂತೆ ನೋಡಿಕೊಳ್ಳಲು ಆದೇಶ ಹೊರಡಿಸಿದ್ದಾರೆ. ಈ ಮೂಲಕ, ದೇಶದಲ್ಲಿರುವ ಪಾಕಿಸ್ತಾನೀಯರನ್ನು ಹೊರಕ್ಕೆ ಹಾಕಲು ಭಾರತ ತೀವ್ರ ತೆರನಾಗಿ ಪ್ರಯತ್ನಿಸುತ್ತಿದೆ.

    Post Views: 281

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.