Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ..!
    ಇತ್ತೀಚಿನ ಸುದ್ದಿ

    ಉಳ್ಳಾಲ: ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ..!

    February 1, 2023
    Share
    ಉಳ್ಳಾಲ: ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದರೂ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು ಕೊಲೆ ಸಂಶಯ ವ್ಯಕ್ತಪಡಿಸಿದೆ. ಛತ್ತೀಸಗಢ ಮೂಲದ ಸರಿತಾ ವರ್ಮ(23) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ. ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ಸರಿತಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಜ.30 ರಂದು ಸಂಜೆ ಪ್ರಕರಣ ಬೆಳಕಿಗೆ ಬಂದಿತ್ತು. ಘಟನೆ ವೇಳೆ ಸಹೋದರರಿಬ್ಬರು ಕೆಲಸಕ್ಕೆ ತೆರಳಿದ್ದರೆ, ಅತ್ತಿಗೆ ಆಸ್ಪತ್ರೆಗೆ ತೆರಳಿದ್ದರು. ಬಾಡಿಗೆ ಮನೆ ಮಾಲೀಕರು ವೃದ್ದರಾಗಿದ್ದು ಅಸೌಖ್ಯದಿಂದಿದ್ದಾರೆ. ಕೆಳಗಿನ ಅಂತಸ್ತಿನಲ್ಲಿ ಮಾಲೀಕರಿದ್ದರೆ, ಮೇಲಿನ ಅಂತಸ್ತಿನಲ್ಲಿ ಬಾಡಿಗೆ ಕುಟುಂಬ ವಾಸ್ತವ್ಯವಿತ್ತು. ಸರಿತಾ ವರ್ಮ ವಿಶೇಷ ಚೇತನರಾಗಿದ್ದು, ಬಾಯಿ ಮತ್ತು ಕಿವಿ ಕೇಳದ ಸ್ಥಿತಿಯಲ್ಲಿದ್ದರು‌. ಸರಿತಾ ಬಾಯಿಗೆ ಬಟ್ಟೆಯನ್ನು ಬಿಗಿಯಾಗಿ ಕಟ್ಟಲಾಗಿದೆ. ಇದು ಸಂಶಯಕ್ಕೆ ಕಾರಣವಾಗಿದ್ದು, ಹತ್ಯೆ ನಡೆಸಿದ ಬಳಿಕ ಯುವತಿಯನ್ನು ನೇಣುಹಾಕಿದರೆ ಅನ್ನುವ ಸಂಶಯವನ್ನು ಉಳ್ಳಾಲ ಪೊಲೀಸರು ವ್ಯಕ್ತಪಡಿಸಿದ್ದಾರೆ. ಕೆಳಗಿನ ಮನೆಯಲ್ಲಿರುವ ವೃದ್ದ ಮಾಲೀಕರಿಗೆ ಯುವಕನೋರ್ವ ಮಧ್ಯಾಹ್ನ ಹಾಗೂ ರಾತ್ರಿ ಊಟ ತರುತ್ತಾನೆ. ಆತ ಮಾತ್ರ ಕಂಪೌಂಡ್ ಪ್ರವೇಶಿಸಿರುವ ಕುರಿತು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ. ಯುಡಿಆರ್ ದಾಖಲಿಸಿರುವ ಪೊಲೀಸರು ಸಂಶಯಾಸ್ಪದರನ್ನು ಠಾಣೆಗೆ ಕರೆಸಿ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ‌.
    Post Views: 165

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.