Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ವೇದಿಕೆಯಲ್ಲೇ ಪುತ್ತೂರಿಗೆ ಮಹಿಳಾ ಠಾಣೆ ಮಂಜೂರು ಮಾಡಿದ ಡಾ.ಜಿ.ಪರಮೇಶ್ವರ್
    ಇತ್ತೀಚಿನ ಸುದ್ದಿ

    ಮಂಗಳೂರು: ವೇದಿಕೆಯಲ್ಲೇ ಪುತ್ತೂರಿಗೆ ಮಹಿಳಾ ಠಾಣೆ ಮಂಜೂರು ಮಾಡಿದ ಡಾ.ಜಿ.ಪರಮೇಶ್ವರ್

    December 1, 2024
    Share

    ಮಂಗಳೂರು: ಪುತ್ತೂರು ಶಾಸಕ ಅಶೋಕ್ ರೈಯವರ ಬೇಡಿಕೆಗೆ ಅಸ್ತು ಎಂದ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳೂರಿನಲ್ಲಿ ಪೊಲೀಸ್ ವಸತಿ ಸಮುಚ್ಚಯ ಉದ್ಘಾಟನೆಯ ವೇದಿಕೆಯಲ್ಲಿಯೇ ಪುತ್ತೂರಿಗೆ ಮಹಿಳಾ ಠಾಣೆಯನ್ನು ಮಂಜೂರು ಮಾಡಿ ಒಂದು ಕೋಟಿ ರೂ. ಮೊತ್ತ ಅನುದಾನ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಮೊದಲು ಮಾತನಾಡಿದ ಪುತ್ತೂರು ಶಾಸಕ ಅಶೋಕ್ ರೈಯವರು, ಗೃಹಸಚಿವರಲ್ಲಿ ಪುತ್ತೂರಿಗೊಂದು ಮಹಿಳಾ ಠಾಣೆಯ ಅಗತ್ಯವಿದೆ. ಈಗ ಇರುವ ಠಾಣೆಯನ್ನು ಬದಲಾವಣೆ ಮಾಡಬೇಕು. ಅದಕ್ಕಾಗಿ 9ಸೆಂಟ್ಸ್ ಜಾಗವನ್ನು ಗುರುತಿಸಿದ್ದೇವೆ. ಜೊತೆಗೆ ಎಸ್ಪಿ ಆಫೀಸನ್ನು ಪುತ್ತೂರಿಗೆ ವರ್ಗಾವಣೆ ಮಾಡಬೇಕು. ಅಧಿಕಾರಿಗಳಿಗೆ ಅದು ದೂರ ಆಗುವುದಿದ್ದಲ್ಲಿ ಕನಿಷ್ಠ ಪಕ್ಷ ಡಿಎಆರ್ ಅನ್ನಾದರೂ ನೀಡಬೇಕು. ಈಗಾಗಲೇ ಅದಕ್ಕೆ ನಾವು 2.10ಎಕ್ರೆ ಜಾಗವನ್ನು ಮೀಸಲಿಟ್ಟಿದ್ದೇವೆ‌‌. ಗುಪ್ತಚರ ಇಲಾಖೆಗೆ ದ.ಕ.ಜಿಲ್ಲೆಯಲ್ಲೊಂದು ಪ್ರತ್ಯೇಕ ಕಚೇರಿ ಮಾಡಬೇಕು ಎಂದು ಮೂರು ಬೇಡಿಕೆಗಳನ್ನು ಗೃಹಸಚಿವರ ಮುಂದಿಟ್ಟಿದ್ದರು. ಬಳಿಕ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಮಾತನಾಡಿ, ಮೊದಲನೇ ಬಾರಿಗೆ ಶಾಸಕರಾಗಿರುವ ಅಶೋಕ್ ರೈಯವರು ಬೇರೆಬೇರೆ ಕೆಲಸ ಮಾಡಬೇಕೆಂಬ ಉತ್ಸಾಹದಲ್ಲಿದ್ದಾರೆ. ನಾನೂ ಮೊದಲ ಬಾರಿ ಗೆದ್ದಾಗ ನಿಮಗಿಂತ ಉತ್ಸುಕನಾಗಿದ್ದೆ‌. ಆದರೆ ಮೊದಲ ಬಾರಿಗೇ ನನ್ನನ್ನು ಸಚಿವನನ್ನಾಗಿ ಮಾಡಿದ್ದರಿಂದ ಗಾಡಿ ಸ್ವಲ್ಪ ಸ್ಲೋ ಆಯ್ತು ಎಂದಾಗ ಸಭೆಯಲ್ಲಿ ನಗುವಿನ ಅಲೆ ಎದ್ದಿತು. ಮುಂದುವರಿದು ಮಾತನಾಡಿದ ಗೃಹಸಚಿವರು, ಮಹಿಳಾ ಠಾಣೆಯನ್ನು ವೇದಿಕೆಯಲ್ಲಿಯೇ ಮಂಜೂರು ಮಾಡಿ. ಬಿಗ್ರೇಡ್ ಪೊಲೀಸ್ ಠಾಣೆ ಮಾಡಿ ಒಂದು ಕೋಟಿ ರೂ. ಅನುದಾನ ಘೋಷಿಸಿದರು‌. ಆದರೆ ಪೊಲೀಸ್ ಅಧಿಕಾರಿಗಳಿಗೆ ಅನಾನುಕೂಲ ಎಂಬ ದೃಷ್ಟಿಯಿಂದ ಎಸ್ಪಿ ಠಾಣೆಯನ್ನು ಮಂಜೂರು ಮಾಡುದಕ್ಕೆ ಹಿಂಜರಿದು, ಡಿಎಆರ್ ಬೇಕೇ ಅನ್ನೋದನ್ನು ಪರಿಶೀಲನೆ ನಡೆಸಿ. ಬೇಕೆಂದಿದ್ದಲ್ಲಿ ಮಂಜೂರು ಮಾಡುತ್ತೇನೆಂದು ಸಕಾರಾತ್ಮಕವಾಗಿ ಸ್ಪಂದಿಸಿದರು‌.

    Post Views: 220

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.