ಮಂಗಳೂರು; ಕೆಲಸಕ್ಕೆಂದು ತೆರಳಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಸುರೇಂದ್ರ ದೇವಾಡಿಗ (31) ನಾಪತ್ತೆಯಾದ ಯುವಕ. ಸುರೇಂದ್ರ ಅವರು ಅ.20ರಂದು ಕೆಲಕ್ಕೆ ಹೋಗುವುದಾಗಿ ಮನೆಯಿಂದ ತೆರಳಿರುವವರು ಮನೆಗೆ ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದಾರೆ. ಅವರು ನಾಪತ್ತೆಯಾಗಿರುವ ಕುರಿತು ಸಂಬಂಧಿಕರು ಮತ್ತು ಸ್ನೇಹಿತರಲ್ಲಿ ವಿಚಾರಿಸಿದ್ದು. ಎಲ್ಲೂ ಪತ್ತೆಯಾಗಿಲ್ಲ. ನಾಪತ್ತೆಯಾದ ದಿನದಿಂದ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಅವರ ಅಣ್ಣ ಪ್ರಸಾದ್ ಎಂಬವರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.