Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಂಕ್ರಾಂತಿ ಬಳಿಕ ಶ್ರೀ ರಾಮ ಮಂದಿರದ ನಿರ್ಮಾಣ ಕಾಮಗಾರಿಗಳಿಗೆ ವೇಗ ಸಿಗಲಿದೆ: ಉಡುಪಿ ಪೇಜಾವರ ಶ್ರೀ
    ಇತ್ತೀಚಿನ ಸುದ್ದಿ

    ಸಂಕ್ರಾಂತಿ ಬಳಿಕ ಶ್ರೀ ರಾಮ ಮಂದಿರದ ನಿರ್ಮಾಣ ಕಾಮಗಾರಿಗಳಿಗೆ ವೇಗ ಸಿಗಲಿದೆ: ಉಡುಪಿ ಪೇಜಾವರ ಶ್ರೀ

    September 23, 2022
    Share

    ಬೆಳ್ತಂಗಡಿ: ದೇಶದ ಸಮಸ್ತ ಜನರ ಬಹು ನಿರೀಕ್ಷೆಯ ಶ್ರೀ ರಾಮ ಮಂದಿರದ ನಿರ್ಮಾಣ ಕಾರ್ಯ ಸಂಕ್ರಾಂತಿ ಬಳಿಕ ಬಹುತೇಕ‌ ಕಾಮಗಾರಿಗಳಿಗೆ ವೇಗ ಸಿಗಲಿದೆ. ಕಂಬಗಳನ್ನು ನಿಲ್ಲಿಸುವ ಕಾರ್ಯ ಸಾಗುತ್ತಿದೆ  ದೇವರನ್ನು ಕುಳ್ಳಿರಿಸುವ ಪೀಠದವರೆಗಿನ ಕಾರ್ಯ ಮುಗಿದಿದೆ ಎಂದು ಉಡುಪಿ ಪೇಜಾವರ ಶ್ರೀಗಳು  ಹೇಳಿದರು.

    ಧರ್ಮಸ್ಥಳದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಬಾಲರಾಮ ದೇವರ ಮೂರುತಿಯನ್ನು ಅಮೃತಶಿಲೆಯಿಂದ ನಿರ್ಮಿಸುವ ವಿಚಾರ ಮುಂದಿದ್ದು, ನೀಲಿ ವರ್ಣವೂ ಅದರಲ್ಲಿ ಒಳಗೊಳ್ಳಲಿದೆ. ಇದನ್ನು ಈಗಾಗಲೇ ಸಭೆಯಲ್ಲಿ ನಿರ್ಣಯಿಸಲಾಗಿದೆ. ಇದಕ್ಕೆ ಬೇಕಾದ ಶಿಲೆಯ ಶೋಧ ನಡೆಯುತ್ತಿದೆ ಎಂದರು. ಉಗ್ರ ಚಟುವಟಿಕೆಗಳ  ಸಂಬಂಧ ಪ್ರತಿಕ್ರಿಯಿಸಿದ ಶ್ರೀಗಳು, ಶಿವಮೊಗ್ಗ ಹಾಗೂ ಕರಾವಳಿ ಭಾಗದಲ್ಲಿ ಉಗ್ರರ ಸಂಚು ಪತ್ತೆಯಾಗಿದೆ. ಇದನ್ನು ಈ ಮೊದಲೇ ಮಟ್ಟ ಹಾಕಬೇಕಿತ್ತು. ಕೇಂದ್ರ, ರಾಜ್ಯ ಸರಕಾರಗಳು ಈಗಾಗಲೇ ಬಂಧಿಸಿದವರನ್ನು ತೀವ್ರ ವಿಚಾರಣೆ ನಡೆಸಿ, ಇದರ ಮೂಲವನ್ನು ಬೇರು ಸಹಿತ ಕಿತ್ತೊಗೆಯಬೇಕು. ಈ ವಿಚಾರಗಳಿಗೆ ಕೋಮು‌ ಬಣ್ಣಹಚ್ಚುವ ಷಡ್ಯಂತ್ರ ನಡೆಯುತ್ತಿದ್ದು ಇದಕ್ಕೆ ಸರಕಾರ ಅವಕಾಶ ಮಾಡಿಕೊಡಬಾರದು. ದೇಶದಲ್ಲಿ ಸದಾ ಶಾಂತಿ ಸುವ್ಯವಸ್ಥೆ ಇರಬೇಕು ಎಂಬುದೇ ನಮ್ಮ ಆಶಯವಾಗಿದೆ. ಕೇಂದ್ರ ಸರಕಾರ ಶೀಘ್ರವಾಗಿ ಉಗ್ರಚಟುವಟಿಕೆಗಳಿಗೆ ಅಂತ್ಯ ಹಾಡಬೇಕು ಅದಕ್ಕೆ ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

    Post Views: 207

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.