Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಫೆ. 11, 12 ರಂದು ಉಡುಪಿಯಲ್ಲಿ ಪ್ರಥಮ ಯಕ್ಷಗಾನ ಸಮ್ಮೇಳನ
    ಇತ್ತೀಚಿನ ಸುದ್ದಿ

    ಫೆ. 11, 12 ರಂದು ಉಡುಪಿಯಲ್ಲಿ ಪ್ರಥಮ ಯಕ್ಷಗಾನ ಸಮ್ಮೇಳನ

    February 1, 2023
    Share

    ಉಡುಪಿ : ಯಕ್ಷಗಾನ ವಿದ್ವಾಂಸ ಹಾಗೂ ಸಂಶೋಧಕ ಡಾ.ಎಂ.ಪ್ರಭಾಕರ ಜೋಶಿ ಅವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 11 ಮತ್ತು 12 ರಂದು ಉಡುಪಿಯ ಎಂ.ಜಿ.ಎA ಕ್ರೀಡಾಂಗಣದಲ್ಲಿ ನಡೆಯುವ ಪ್ರಥಮ ಯಕ್ಷಗಾನ ಸಮ್ಮೇಳನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಸಮ್ಮೇಳನದ ಕಾರ್ಯಾಧ್ಯಕ್ಷ ಡಾ.ಜಿ.ಎಲ್.ಹೆಗಡೆ ಹೇಳಿದರು.

    ಅವರು ಸೋಮವಾರ ನಗರದ ಎಂ.ಜಿ.ಎ. ಕಾಲೇಜಿನ ರವೀಂದ್ರ ಮಂಟಪದಲ್ಲಿ ಯಕ್ಷಗಾನ ಸಮ್ಮೇಳನದ ಪೂರ್ವಭಾವಿ ತಯಾರಿಯ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು.

    ಯಕ್ಷಗಾನ ಸಮ್ಮೇಳನವು ಸಾಹಿತ್ಯ ಸಮ್ಮೇಳನದ ಮಾದರಿಯಲ್ಲಿ ಅದ್ಧೂರಿ ಮೆರವಣಿಗೆಯೊಂದಿಗೆ ಪ್ರಾರಂಭವಾಗಲಿದ್ದು, ಮಾನ್ಯ ಮುಖ್ಯಮಂತ್ರ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಚಿವರು, ಶಾಸಕರು ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದರು.

    ಸಮ್ಮೇಳನದಲ್ಲಿ ಎರಡು ದಿನ ಗೋಷ್ಠಿ, ಸನ್ಮಾನ, ಹಾಗೂ ಯಕ್ಷಗಾನ ಪ್ರದರ್ಶನ ನಡೆಯಲಿದ್ದು, ಸಮ್ಮೇಳನದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರಿಗೂ ಎರಡು ದಿನ ಊಟ, ಉಪಾಹಾರದ ವ್ಯವಸ್ಥೆಯನ್ನು ಮಾಡಲಾಗುವುದು ಎಂದರು.

    ಯಕ್ಷಗಾನ ಸಂಬAಧಿಸಿದ ಕರಕುಶಲ ವಸ್ತುಗಳು, ವೇಷಭೂಷಣ, ವಾದ್ಯ ಪರಿಕರ ಹಾಗೂ ಪುಸ್ತಕಗಳ ಮಳಿಗೆಗಳು ಸಮ್ಮೇಳನದ ಪ್ರಧಾನ ಆಕರ್ಷಣೆಯಾಗಲಿದೆ. ಯಕ್ಷಗಾನ ಕಲಾಸಕ್ತರಿಗೆ ಅಪರೂಪದ ಮತ್ತು ಐತಿಹಾಸಿಕ ಸಮ್ಮೇಳನವಾಗಿ ಸಂಭ್ರಮಿಸುವ ಅಭೂತಪೂರ್ವ ಅವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಸಂಘಟನಾ ಸಮಿತಿಯ ಸದಸ್ಯರು ಶ್ರಮವಹಿಸಿ ಸಹಕರಿಸುವಂತೆ ತಿಳಿಸಿದರು.

    ಸಭೆಯಲ್ಲಿ ಶಾಸಕ ರಘುಪತಿ ಭಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಅಶೋಕ ಛಲವಾದಿ ಹಾಗೂ ವಿ.ಎನ್.ಮಲ್ಲಿಕಾರ್ಜುನ ಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಯಕ್ಷಗಾನ ಅಕಾಡೆಮಿಯ ರಿಜಿಸ್ಟಾçರ್ ಶಿವರುದ್ರಪ್ಪ, ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ.ಎಂ.ಎಲ್.ಸಾಮಗ, ಸಮ್ಮೇಳನದ ಪ್ರಧಾನ ಸಂಚಾಲಕ ಕಿಶನಕುಮಾರ್ ಹೆಗಡೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Post Views: 194

    Related Posts

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.