Facebook Twitter Instagram
    Thursday, September 3
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಯತೀಶ್ ಪೆರುವಾಯಿ ವಿರುದ್ಧದ ಗಡಿಪಾರು ಆದೇಶ ರದ್ದು..!!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಯತೀಶ್ ಪೆರುವಾಯಿ ವಿರುದ್ಧದ ಗಡಿಪಾರು ಆದೇಶ ರದ್ದು..!!

    September 2, 2026
    Share

    ಮಂಗಳೂರು: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಯತೀಶ್ ಎ. ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 55(ಎ), 55(ಬಿ) ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ಜಿಲ್ಲೆಗೆ ಗಡಿಪಾರು ಮಾಡುವಂತೆ ವಿಟ್ಲ ಪೊಲೀಸ್ ಠಾಣಾಧಿಕಾರಿ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸದ್ಯಕ್ಕೆ ಕೈಬಿಟ್ಟು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಐಪಿಎಸ್ ಆದೇಶ ಹೊರಡಿಸಿದ್ದಾರೆ. ಯತೀಶ್ ಪೆರುವಾಯಿ ವಿರುದ್ಧ ಕೆಲವು ತಿಂಗಳ ಹಿಂದೆ ಗಡಿಪಾರು ಶೋಕಾಸ್ ನೋಟೀಸ್ ಜಾರಿಯಾಗಿದ್ದು ಈ ಸಂಬಂಧ 2026ರ ಜುಲೈ 15ರಂದು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರ ನ್ಯಾಯಾಲಯದಲ್ಲಿ ವಿಚಾರಣೆ ನಿಗದಿಯಾಗಿತ್ತು.

    ಈ ಸಂದರ್ಭದಲ್ಲಿ ಯತೀಶ್ ಪೆರುವಾಯಿ ಅವರು ಸ್ವತಃ ನ್ಯಾಯಾಲಯಕ್ಕೆ ಹಾಜರಾಗಿ,ಯಾವುದೇ ವಕೀಲರನ್ನು ನೇಮಿಸಿಕೊಳ್ಳದೆ (Party-in-Person) ಆಗಿ ತಮ್ಮ ಪರವಾಗಿ ತಾವೇ ಆಕ್ಷೇಪಣೆ ಸಲ್ಲಿಸಿ ವಾದ ಮಂಡಿಸಲು ಅನುಮತಿ ಕೋರಿ ಮನವಿ ಸಲ್ಲಿಸಿದ್ದರು.ಸದರಿ ಮನವಿಯನ್ನು ಪರಿಗಣಿಸಿದ ಮಾನ್ಯ ನ್ಯಾಯಾಲಯವು, ಅವರಿಗೆ Party-in-Person ಆಗಿ ತಮ್ಮ ಪರವಾಗಿ ಪ್ರಕರಣವನ್ನು ನಡೆಸಲು ಹಾಗೂ ವಾದ ಮಂಡಿಸಲು ಅನುಮತಿ ನೀಡಿತ್ತು. ನಂತರ ನಡೆದ ವಿಚಾರಣೆಯಲ್ಲಿ ಪೊಲೀಸರು ಸಲ್ಲಿಸಿದ್ದ ಗಡಿಪಾರು ಪ್ರಸ್ತಾವನೆ ಹಾಗೂ ಯತೀಶ್ ಪೆರುವಾಯಿ ಪರ ಸಲ್ಲಿಸಲಾಗಿದ್ದ ಆಕ್ಷೇಪಣೆಗಳನ್ನು ಪರಿಶೀಲಿಸಲಾಯಿತು.

    ವಿಚಾರಣೆಯಲ್ಲಿ ಯತೀಶ್ ಅವರು ಕರ್ನಾಟಕ ಪೊಲೀಸ್ ಕಾಯ್ದೆಯ ಕಲಂ 55(ಎ) ಅಡಿಯಲ್ಲಿ ಕ್ರಮ ಕೈಗೊಳ್ಳಲು ಅರ್ಹ ವ್ಯಕ್ತಿಯಾಗಿರುವುದು ಕಂಡುಬಂದಿದೆ. ಆದರೆ, ಕಳೆದ ಒಂದು ವರ್ಷದಿಂದ ಅವರು ಯಾವುದೇ ಅನಧಿಕೃತ ಅಥವಾ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಬಂದಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

    ಅಲ್ಲದೆ, ಕಳೆದ ಒಂದು ವರ್ಷದಲ್ಲಿ ಕಲಂ 55(ಎ)ಗೆ ಸಂಬಂಧಿಸಿದಂತೆ ತುರ್ತು ಎಚ್ಚರಿಕೆ ಅಥವಾ ಅಲಾರಂ ಉಂಟಾಗುವ ರೀತಿಯ ಯಾವುದೇ ಚಟುವಟಿಕೆಯಲ್ಲಿ ಅವರು ತೊಡಗಿರುವುದು ಕಂಡುಬಂದಿಲ್ಲ ಎಂದು ಅಧಿಕಾರಿಗಳು ದಾಖಲಿಸಿದ್ದಾರೆ.

    ಯತೀಶ್ ಪೆರುವಾಯಿ ಅವರು ಮುಂದಿನ ದಿನಗಳಲ್ಲಿ ಯಾವುದೇ ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾದರೆ, ಅವರ ವಿರುದ್ಧ ಹೊಸದಾಗಿ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ಸ್ವಾತಂತ್ರ್ಯವಿದೆ ಎಂದು ಆದೇಶದಲ್ಲಿ ಸ್ಪಷ್ಟಡಿಸಲಾಗಿದೆ.

    ಅವರ ಉತ್ತಮ ನಡವಳಿಕೆಯನ್ನು ಗಮನದಲ್ಲಿಟ್ಟುಕೊಂಡು ಪ್ರಸ್ತುತ ಹಂತದಲ್ಲಿ ಗಡಿಪಾರು ಪ್ರಕ್ರಿಯೆಯನ್ನು ಕೈಬಿಡಲಾಗಿದೆ. ಈ ಕುರಿತು 2026ರ ಆಗಸ್ಟ್ 26ರಂದು ತೆರೆದ ನ್ಯಾಯಾಲಯದಲ್ಲಿ ಆದೇಶವನ್ನು ಪ್ರಕಟಿಸಲಾಗಿದೆ.

    ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ

    Post Views: 13

    Related Posts

    ಬೆಳ್ತಂಗಡಿ: ಡೆತ್ ನೋಟ್ ಬರೆದಿಟ್ಟು 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!!

    September 3, 2026

    ಉಪ್ಪಿನಂಗಡಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು!!

    September 3, 2026

    ಹಿಂ. ಜಾ. ವೇ. ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸದಸ್ಯನಿಗೆ ಗಡಿಪಾರು ಆದೇಶ…!

    September 2, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಡೆತ್ ನೋಟ್ ಬರೆದಿಟ್ಟು 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!!

    September 3, 2026

    ಉಪ್ಪಿನಂಗಡಿ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು!!

    September 3, 2026

    ಬಂಟ್ವಾಳ: ಯತೀಶ್ ಪೆರುವಾಯಿ ವಿರುದ್ಧದ ಗಡಿಪಾರು ಆದೇಶ ರದ್ದು..!!

    September 2, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.