Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 4 ಮಂದಿ ತಂಡವೊಂದು ಯುವಕನ‌ ಮೇಲೆ ತಲ್ವಾರ್‌ನಿಂದ ದಾಳಿ..! ಓರ್ವನ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: 4 ಮಂದಿ ತಂಡವೊಂದು ಯುವಕನ‌ ಮೇಲೆ ತಲ್ವಾರ್‌ನಿಂದ ದಾಳಿ..! ಓರ್ವನ ಬಂಧನ

    November 25, 2025
    Share

    ಮಂಗಳೂರಿನ ಬಜ್ಪೆ ಎಡಪದವು ಎಂಬಲ್ಲಿ ಯುವಕನೋರ್ವನ ಮೇಲೆ ತಲವಾರ್ ದಾಳಿ ನಡೆಸಿದ ದುಷ್ಕರ್ಮಿಗಳ ಪೈಕಿ ಓರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. 

    ಎಡಪದವು ಪೂಪಾಡಿ ಕಲ್ಲು ನಿವಾಸಿ ಅಖಿಲೇಶ್ ಎಂಬವರ ಮೇಲೆ ನಾಲ್ಕು ಮಂದಿಯ ತಂಡ ತಲವಾರು ದಾಳಿ ನಡೆಸಿದೆ. ಹಲ್ಲೆಗೆ ಒಳಗಾದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದೇ ಬೈಕಿನಲ್ಲಿ ನಾಲ್ವರು ಕುಳಿತುಕೊಂಡು, ಕೈಯಲ್ಲಿ ತಲವಾರು ಹಿಡಿದುಕೊಂಡು ಸಾಗುತ್ತಿದ್ದುದ್ದನ್ನು ಅಖಿಲೇಶ್‌ ನೋಡಿದ್ದರು. ಈ ಕುರಿತು ವಿಡಿಯೊ ಚಿತ್ರೀಕರಿಸಲು ಅವರನ್ನು ಹಿಂಬಾಲಿಸಿದ್ದರು. ಬೈಕಿನಲ್ಲಿ ಸಾಗುತ್ತಿದ್ದ ಕಿಡಿಗೇಡಿಗಳು ಅಖಿಲೇಶ್‌ ಅವರತ್ತ ತಲವಾರು ಬೀಸಿದ್ದು ಕೈಗಳಿಗೆ ಗಾಯಗಳಾಗಿವೆ. ಆ ನಾಲ್ವರು ಆರೋಪಿಗಳಲ್ಲಿ ಒಬ್ಬನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನುಳಿದ ಮೂವರು ಪರಾರಿಯಾಗಿದ್ದಾರೆ . ಘಟನಾ ಸ್ಥಳಕ್ಕೆ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.  ನಾಲ್ವರು ಆರೋಪಿಗಳ ಗುರುತು ಪತ್ತೆಯಾಗಿದ್ದು, ಆರೋಪಿಗಳು ಈ ಘಟನೆಗೂ ಮುನ್ನ ಬಾರ್ ಒಂದರಿಂದ ಹೊರಗೆ ಬರುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಹೀಗಾಗಿ ಆರೋಪಿಗಳೆಲ್ಲರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

    Post Views: 139

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.