ಮಂಗಳೂರು : ಕಾರವಾರ ಹಾಗೂ ಪಣಂಬೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಕರಾವಳಿ ಕರ್ನಾಟಕದ ಮಂಗಳೂರು, ಉತ್ತರ ಒಳನಾಡಿನ ಬಾಗಲಕೋಟೆ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರಿನಲ್ಲಿ ಗರಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಹಾಗಾಗಿ ಹವಮಾನ ಇಲಾಖೆಯು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಹೊನ್ನಾವರದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರಲ್ಲಿ 14.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದ ಹಲವೆಡೆ ಒಣಹವೆ ಇದ್ದು, ಕರಾವಳಿಯಲ್ಲಿ ಉಷ್ಣ ಅಲೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿಯಲ್ಲಿ ಗರಿಷ್ಠ ತಾಪಮಾನ 36-37 ಡಿಗ್ರಿ ಸೆಲ್ಸಿಯಸ್ನಷ್ಟಿದೆ, ಬೆಳಗಾವಿ, ಬೀದರ್, ವಿಜಯಪುರ, ಧಾರವಾಡ, ಗದಗ, ಕೊಪ್ಪಳ, ರಾಯಚೂರು ಮತ್ತ ಹಾವೇರಿಯಲ್ಲಿ 32-34 ಡಿಗ್ರಿ ಸೆಲ್ಸಿಯಸ್, ಬಾಗಲಕೋಟೆ, ಕಲಬುರಗಿಯಲ್ಲಿ 35-37 ಡಿಗ್ರಿ ಸೆಲ್ಸಿಯಸ್, ದಾವಣಗೆರೆ, ಹಾಸನ, ಚಿಂತಾಮಣಿ, ಮಂಡ್ಯ, ಮಡಿಕೇರಿ, ಶಿವಮೊಗ್ಗ ಮತ್ತು ಮೈಸೂರು, ಆಗುಂಬೆಯಲ್ಲಿ 35 ಡಿಗ್ರಿ ಸೆಲ್ಸಿಯಸ್ನಷ್ಟಿದೆ. ಮಡಿಕೇರಿಯಲ್ಲಿ ಕಳೆದ 24 ಗಂಟೆಗಳಲ್ಲಿ -2.8 ಡಿಗ್ರಿ ಸೆಲ್ಸಿಯಸ್ನಷ್ಟು ಕನಿಷ್ಠ ತಾಪಮಾನದಲ್ಲಿ ಕುಸಿತ ಕಂಡಿದೆ. ಕರಾಳಿಯಲ್ಲಿ ಕನಿಷ್ಠ ತಾಪಮಾನ 22-23 ಡಿಗ್ರಿ ಸೆಲ್ಸಿಯಸ್ನಷ್ಟಿದೆ, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ ಧಾರವಾಡದಲ್ಲಿ 19-22 ಡಿಗ್ರಿ ಸೆಲ್ಸಿಯಸ್ನಷ್ಟಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.