Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಅನುಮಾನಾಸ್ಪದವಾಗಿ ಯುವಕ ಸಾವು- ತಾಯಿ ಸೇರಿದಂತೆ ಮೂವರು ಪೊಲೀಸ್ ವಶಕ್ಕೆ
    ಇತ್ತೀಚಿನ ಸುದ್ದಿ

    ಪುತ್ತೂರು: ಅನುಮಾನಾಸ್ಪದವಾಗಿ ಯುವಕ ಸಾವು- ತಾಯಿ ಸೇರಿದಂತೆ ಮೂವರು ಪೊಲೀಸ್ ವಶಕ್ಕೆ

    May 10, 2024
    Share

    ಪುತ್ತೂರು: ಇಲ್ಲಿನ ಬೆಟ್ಟಂಪ್ಪಾಡಿಯ ಪಾರೆ ಎಂಬಲ್ಲಿ ಯುವಕನ ಸಾವಿನ ಹಿಂದೆ ಅನುಮಾನದ ಹುತ್ತ ಬೆಳೆದಿದೆ. ಕುತ್ತಿಗೆಗೆ ನಾಯಿ ಸಂಕೋಲೆ ಬಿಗಿದ ಪರಿಣಾಮದಿಂದಲೇ ಆಗಿದೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಪೊಲೀಸರು ಯುವಕನ ತಾಯಿ ಸೇರಿದಂತೆ ಮೂವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಚೇತನ್ (33) ಮೃತಪಟ್ಟ ಯುವಕ. ಈ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಪೋಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಚೇತನ್ ನೇಣು ಬಿಗಿದು ಮೃತಪಟ್ಟಿರುವ ಬಗ್ಗೆ ಆತನ ತಾಯಿ ಪೋಲೀಸ್ ದೂರು ದಾಖಲಿಸಿದ್ದರು‌. ಚೇತನ್ ಗುರುವಾರ ಮದ್ಯಪಾನ ಮಾಡಿ ಮನೆಗೆ ಬಂದಿದ್ದ. ಬಳಿಕ ತಾಯಿಯೊಂದಿಗೆ ಜಗಳವಾಡಿ ಮನೆಪಕ್ಕದ ಯೂಸುಫ್ ಎನ್ನುವವರ ಮನೆ ಬಾಗಿಲು ಬಡಿದಿದ್ದಾನೆ. ಇದನ್ನು ಯೂಸುಫ್ ಅವರು ಚೇತನ್ ತಾಯಿಗೆ ಕರೆ ಮಾಡಿ ತಿಳಿಸಿದ್ದರು. ಅಲ್ಲಿಗೆ ಬಂದ ಚೇತನ್ ತಾಯಿ ಉಮಾವತಿಯವರು ನಾಯಿಯನ್ನು ಕಟ್ಟುವ ಸಂಕೊಲೆಯನ್ನು ಚೇತನ್ ಸೊಂಟಕ್ಕೆ ಹಾಕಿ ಮನೆಗೆ ಎಳೆದೊಯ್ದಿದ್ದರು. ಈ ವೇಳೆ ಯೂಸುಫ್ ಸೇರಿದಂತೆ ಸ್ಥಳೀಯ ನಿವಾಸಿಗಳು ಚೇತನ್‌ನನ್ನು ಮನೆಗೆ ಎಳೆದೊಯ್ದಿದ್ದರು ಎನ್ನಲಾಗಿದೆ. ಸಂಕೋಲೆ ಎಳೆಯುವ ಸಮಯದಲ್ಲಿ ಚೇತನ್ ಕುತ್ತಿಗೆಗೆ ಸಂಕೋಲೆ ಸುತ್ತಿಕೊಂಡಿದೆ. ಕುತ್ತಿಗೆಯ ಸಂಕೋಲೆ ಬಿಗಿದು ಚೇತನ್ ಸಾವನ್ನಪ್ಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದ್ದರಿಂದ ಘಟನೆಗೆ ಸಂಬಂಧಿಸಿದಂತೆ ತಾಯಿ ಉಮಾವತಿ ಸೇರಿದಂತೆ ಮೂವರನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ. ಮೃತದೇಹವನ್ನು ಶವಪರೀಕ್ಷೆಯಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ‌. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 226

    Related Posts

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    MCC ಬ್ಯಾಂಕ್‌ನಲ್ಲಿ ವಾರ್ಷಿಕ ಕಾರ್ಯಕ್ಷಮತೆ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ – 2026

    June 15, 2026

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.