Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಯುವತಿಯನ್ನು ಹಿಂಬಾಲಿಸಿ ಕಿರುಕುಳ: ಮೂವರು ಆರೋಪಿಗಳು ಅರೆಸ್ಟ್
    ಇತ್ತೀಚಿನ ಸುದ್ದಿ

    ಯುವತಿಯನ್ನು ಹಿಂಬಾಲಿಸಿ ಕಿರುಕುಳ: ಮೂವರು ಆರೋಪಿಗಳು ಅರೆಸ್ಟ್

    December 28, 2025
    Share

    ಬೆಂಗಳೂರು: ನಗರದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಯುವತಿಯನ್ನು ಹಿಂಬಾಲಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಮೂವರು ಯುವಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಸೆಂಬರ್ 24 ರಂದು ಮಹಿಳೆ ಬೈಕ್ ನಲ್ಲಿ ಜಯನಗರ ಮೆಟ್ರೋ ನಿಲ್ದಾಣದಿಂದ ಬಿಟಿಎಂ ಲೇಔಟ್ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿತ್ತು ಎಂದು ತಿಳಿಯಲಾಗಿದೆ.

    ಆರೋಪಿಗಳಲ್ಲಿ 18 ವರ್ಷದ ಗ್ಯಾರೇಜ್ ಕೆಲಸಗಾರನೂ ಸೇರಿದ್ದು, 19 ವರ್ಷದ ಇತರ ಇಬ್ಬರು ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯ ವಿಡಿಯೋವನ್ನು ಪ್ರಯಾಣಿಕರೊಬ್ಬರು ರೆಕಾರ್ಡ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು. ಬೆಂಗಳೂರು ಪೊಲೀಸರನ್ನು ಟ್ಯಾಗ್ ಮಾಡಿ ಕ್ರಮಕ್ಕೆ ಒತ್ತಾಯಿಸಿದ್ದರು.

    ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಹಿಳೆಯ ಪೊಪೈಲ್ ನಲ್ಲಿ ನಟಿ ಎಂದು ಹೇಳಿಕೊಂಡಿದ್ದಾರೆ.

    ಬೈಕ್ ನಲ್ಲಿ ಮೂವರು ಅಪರಿಚಿತ ಯುವಕರು ತನ್ನನ್ನು ಹಿಂಬಾಲಿಸಲು ಪ್ರಾರಂಭಿಸಿದ್ದರು. ಆರಂಭದಲ್ಲಿ ಕಡಿಮೆ ವಾಹನಗಳು ಚಲಿಸುತ್ತಿದ್ದ ಏಕಾಂತ ರಸ್ತೆಯಲ್ಲಿ ನಂತರ ಮುಖ್ಯ ರಸ್ತೆಯಲ್ಲೂ ಅವರು ತನನ್ನು ಹಿಂಬಾಲಿಸಿದರು. ಅವರ ನಡವಳಿಕೆಯು ನನ್ನನ್ನು ಕೆರಳಿಸಿತು. ಅಲ್ಲದೇ ಅಸುರಕ್ಷಿತ ಭಾವನೆ ಉಂಟುಮಾಡಿತು. ಅವರು ನಿಲ್ಲಿಸುತ್ತಾರೆಯೇ ಎಂದು ಪರಿಶೀಲಿಸಲು ಬೈಕ್ ನ್ನು ನಿಧಾನವಾಗಿ ಓಡಿಸಲು ಪ್ರಯತ್ನಿಸಿದೆ. ಆದರೆ ನಾನು ಉಡುಪಿ ಗಾರ್ಡನ್ ಸಿಗ್ನಲ್ ತಲುಪುವವರೆಗೂ ಅವರು ನನ್ನನ್ನು ಹಿಂಬಾಲಿಸಿದರು ಎಂದು ಅವರು ಹೇಳಿದ್ದಾರೆ.

    ಸಿಗ್ನಲ್ ತಲುಪಿದ ನಂತರ ಅವರು ಹಾಗೆಯೇ ಬರುತ್ತಿದ್ದರು. ತಕ್ಷಣವೇ ಅವರ ಬೈಕ್ ನ ಮುಂಭಾಗದಿಂದ ಪೋಟೋ ತೆಗೆದುಕೊಂಡೆ. ತದನಂತರ ಅವರು ಪರಾರಿಯಾದರು. ಬೈಕ್ ನ ಹಿಂಬದಿಯ ನಂಬರ್ ಪ್ಲೇಟ್ ಅನ್ನು ರೆಕಾರ್ಡ್ ಮಾಡದಂತೆ ತಡೆಯಲು ತಮ್ಮ ಕಾಲಿನಿಂದ ಮುಚ್ಚಿದರು. ಆದಾಗ್ಯೂ, ಈ ಸಣ್ಣ ವಿಡಿಯೋವನ್ನು ರೆಕಾರ್ಡ್ ಮಾಡಿದೆ ಎಂದು ಅವರು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

    ಆಕೆಯ ದೂರಿನ ಆಧಾರದ ಮೇಲೆ, ಎಸ್‌ಜಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ನಂತರ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    Post Views: 111

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.