Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಡ್ರಗ್ ಅಡಿಕ್ಟ್ ಹೆಸರಲ್ಲಿ ಮಾನಸಿಕ ಸಮಸ್ಯೆಯ ಯುವತಿಯ ವಿಡಿಯೋ ವೈರಲ್
    ಇತ್ತೀಚಿನ ಸುದ್ದಿ

    ಮಂಗಳೂರು: ಡ್ರಗ್ ಅಡಿಕ್ಟ್ ಹೆಸರಲ್ಲಿ ಮಾನಸಿಕ ಸಮಸ್ಯೆಯ ಯುವತಿಯ ವಿಡಿಯೋ ವೈರಲ್

    September 10, 2023
    Share

    ಮಂಗಳೂರು: ಡ್ರಗ್ ಅಡಿಕ್ಟ್ ಹೆಸರಲ್ಲಿ ಮಾನಸಿಕ ಸಮಸ್ಯೆಯ ಯುವತಿಯ ವಿಡಿಯೋವೊಂದು ವೈರಲ್ ಆಗಿದೆ. ಮಂಗಳೂರಿನ ಕದ್ರಿ ಠಾಣೆಯಲ್ಲಿ ಪೊಲೀಸರ ಮೇಲೆ ದಾಳಿ‌ ನಡೆಸುವ ವಿಡಿಯೋ ವೈರಲ್ ಆಗಿದೆ.

    ಯುವತಿಯೊಬ್ಬಳನ್ನ ನಾಲ್ಕೈದು ಮಹಿಳಾ ಪೊಲೀಸ್ ಸಿಬ್ಬಂದಿ ನಿಯಂತ್ರಿಸುತ್ತಿರುವುದು ದೃಶ್ಯದಲ್ಲಿ ಸೆರೆಯಾಗಿದೆ. ಈ ವೇಳೆ ಪೊಲೀಸ್ ಸಿಬ್ಬಂದಿಗೆ ತುಳಿದು ಹಲ್ಲೆಗೆ ಯತ್ನಿಸಿದ್ದಾರೆ.ಈ ವೇಳೆ ಯುವತಿ ನಿಯಂತ್ರಿಸಲು ಪೊಲೀಸರು ಕೈ ಗೆ ಕೋಳ ತೊಡಿಸಲು ಮುಂದಾಗಿದ್ದಾರೆ. ಘಟನೆ ಬಳಿಕ ವೈರಲ್ ವಿಡಿಯೋ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸ್ಪಷ್ಟನೆ ನೀಡಿದ್ದು, ಸೆ.1 ರ ಬೆಳಿಗ್ಗೆ 06.50ಕ್ಕೆ ಪಂಪವೆಲ್ ಗಣೇಶ್ ಮೆಡಿಕಲ್ ನಲ್ಲಿ ಈ ಯುವತಿ ಸಿಕ್ಕಿದ್ದಾಳೆ.ಅಸಾಮಾನ್ಯವಾಗಿ ಹಾಗೂ ಆಕ್ರಮಣಕಾರಿ ರೀತಿಯಲ್ಲಿ ವರ್ತಿಸಿದ್ದಾಳೆ. ಇದನ್ನು ಅಬಕಾರಿ ಇಲಾಖೆಯ ಅಧಿಕಾರಿಯೊಬ್ಬರು ಗಮನಿಸಿ ಮಾದಕ ದ್ರವ್ಯ ಸೇವನೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಆಕೆಯನ್ನು ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗಲು ಪ್ರಯತ್ನಿಸಿದಾಗ ಹಲ್ಲೆಗೆ ಯತ್ನಿಸಿದ್ದಾಳೆ. ಬಳಿಕ ಕದ್ರಿ ಪೊಲಿಸರ ಸಹಾಯದಿಂದ ಠಾಣೆಗೆ ಅಬಕಾರಿ ಅಧಿಕಾರಿ ಕರೆ ತಂದಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿದ್ದಾಳೆ. ಬಳಿಕ ಮಹಿಳಾ ಸಿಬ್ಬಂದಿ ಬಲದೊಂದಿಗೆ ಯುವತಿ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಆದರೆ ವೈದ್ಯಕೀಯ ತಪಾಸಣೆಯಲ್ಲಿ ಮಾದಕ ದ್ರವ್ಯ ಪರೀಕ್ಷೆ ನೆಗೆಟಿವ್ ಬಂದಿದೆ. ನಂತರ ಅಕೆಯನ್ನು ಆಕೆಯ ಪೋಷಕರ ವಶಕ್ಕೆ ವಹಿಸಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ . ಆಕೆ ಮಾನಸಿಕ ಸಮಸ್ಯೆಯಿಂದ ಯುವತಿ ಬಳಲುತ್ತಿರೋ ಬಗ್ಗೆ ಮಾಹಿತಿ ದೊರಕಿದೆ ಎಂದು ತಿಳಿಸಿದ್ದಾರೆ.

    Post Views: 295

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.