Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ವಿದ್ಯಾರ್ಥಿಗಳ ಮೇಲೆ ಯುವಕರಿಂದ ಹಲ್ಲೆ..!! ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿಗಳ ಮೇಲೆ ಯುವಕರಿಂದ ಹಲ್ಲೆ..!! ಇಬ್ಬರ ಬಂಧನ

    November 7, 2025
    Share

    ಪುತ್ತೂರು : ಜೊತೆಗೆ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಅನಾರೋಗ್ಯ ಪೀಡಿತನಾದ ಕಾರಣ ಆತನನ್ನು ನೋಡಲು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಗುಂಪಿನ ಮೇಲೆ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ನಡೆದಿದೆ.

    ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬೈಕ್ ಸವಾರರಾದ ಮುಸ್ತಫಾ ಮತ್ತು ಸಹಸವಾರ ಮುಸ್ತಫಾ ಪೆರಿಯಡ್ಕ ಎಂದು ಗುರುತಿಸಲಾಗಿದೆ.

    ತಮ್ಮದೇ ಕಾಲೇಜಿನಲ್ಲಿ ಓದುತ್ತಿರುವ ಸಹಪಾಠಿ ವಿದ್ಯಾರ್ಥಿ ಇತ್ತೀಚೆಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದು, ಆತನ ಆರೋಗ್ಯ ವಿಚಾರಿಸುವ ಸಲುವಾಗಿ, ಕಾಲೇಜಿನ ಕೆಲವು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಆತನ ಮನೆಗೆ ಗುರುವಾರ ನ.6 ರಂದು ಬೆಳಗ್ಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ವಿದ್ಯಾರ್ಥಿಗಳ ಹೆಸರು, ಕಾಲೇಜ್ ಹಾಗೂ ಊರಿನ ಬಗ್ಗೆ ವಿಚಾರಿಸಿ ಬಳಿಕ ವಿಭಿನ್ನ ಕೋಮುಗಳ ವಿದ್ಯಾರ್ಥಿ /ವಿದ್ಯಾರ್ಥಿನಿಯರು ಜೊತೆಗೆ ತೆರಳುತ್ತಿರುವ ಬಗ್ಗೆ ತಕರಾರು ತೆಗೆದು, ಕೋಮುದ್ವೇಷದಿಂದ ಅವಾಚ್ಯವಾಗಿ ಬೈದು, ಓರ್ವ ವಿದ್ಯಾರ್ಥಿಗೆ ಹಲ್ಲೆ ನಡೆಸಿರುತ್ತಾರೆ. ಈ ಬಗ್ಗೆ ಪ್ರಕರಣ ದಾಖಲಾಗಿತ್ತು.

    Post Views: 56

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.