Facebook Twitter Instagram
    Thursday, July 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಯುವಕನ ಸಾವು ಪ್ರಕರಣ- ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಯುವಕನ ಸಾವು ಪ್ರಕರಣ- ಆರೋಪಿಯ ಬಂಧನ

    July 16, 2026
    Share

    ಬೆಳ್ತಂಗಡಿ : ಕುವೆಟ್ಟು ಗ್ರಾಮದ ಶಕ್ತಿನಗರದ ಎಸ್‌.ಎಲ್.ವಿ ಇ- ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್‌ನಲ್ಲಿ ಜು.೧ ರಂದು ನಡೆದ ಕಳ್ಳತನ ಪ್ರಕರಣ ಸಂಬಂಧ ಸಾವನ್ನಪ್ಪಿದ ಮುಸ್ತಾಕ್ ಜೊತೆಯಲ್ಲಿದ್ದ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ಬೆಳ್ತಂಗಡಿ ತಾಲೂಕಿನ ಕಾಶಿಪಟ್ಟ ಗ್ರಾಮದ ನಿವಾಸಿ ಇಸುಬು ಎಂಬವರ ಪುತ್ರ ಇಬ್ರಾಹಿಂ ಲತೀಫ್(೩೬ವ) ಎಂಬಾತನನ್ನು ಬೆಳ್ತಂಗಡಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಮ್ ನೇತೃತ್ವದ ತಂಡ ಕಾಶಿಪಟ್ಟದಲ್ಲಿ ಜು.೧೪ ರಂದು ಸಂಜೆ ೩ ಗಂಟೆಗೆ ಬಂಧಿಸಿ ವಿಚಾರಣೆ ನಡೆಸಿ ಜು.೧೫ ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

    ಪ್ರಕರಣದ ವಿವರ: ಕುವೆಟ್ಟು ಗ್ರಾಮದ ಶಕ್ತಿನಗರ ಎಂಬಲ್ಲಿರುವ ಎಸ್.ಎಲ್.ವಿ ಇ ಪವರ್ ಪ್ರೈವೇಟ್ ಲಿಮಿಟೆಡ್ ರಿಸೀವಿಂಗ್ ಸ್ಟೇಷನ್‌ ನಲ್ಲಿ ಜು.೧ ರಂದು ರಿಸೀವಿಂಗ್ ಸ್ಟೇಷನ್‌ ಕಂಪೌಂಡ್‌ನ ಒಳಗೆ ತೊಂಡೆಕಾಯಿ ಬೆಳೆಯಲು ಚಪ್ಪರಕ್ಕೆ ಹಾಕಿದ್ದ ಜಿಐ ಸ್ಟೀಲ್ ವಯರ್ ಗೆ ಅಪರಿಚಿತ ಗಂಡಸು ಕುತ್ತಿಗೆಗೆ ವಯ‌ರ್ ಸಿಕ್ಕಿಕೊಂಡು ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ೩೫/೨೦೨೬ ರಂತೆ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣದಲ್ಲಿ ಮೃತಪಟ್ಟ ವ್ಯಕ್ತಿ ಹೆಸರು ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಜನತಾ ಕಲೋನಿ ನಿವಾಸಿ ಶರೀಫ್.ಕೆ ಮಗ ಮುಸ್ತಾಕ್‌(೨೭ವ) ಎಂಬುದಾಗಿ ತಿಳಿದುಬಂದಿದ್ದು, ಪ್ರಕರಣದಲ್ಲಿ ಮೃತಪಟ್ಟ ಮುಸ್ತಾಕ್‌ನ ಮೃತದೇಹ ಪತ್ತೆಯಾದ ಸ್ಥಳದ ಹತ್ತಿರ ರಿಸಿವಿಂಗ್ ಸ್ಟೇಷನ್ ನ ಕಂಪೌಂಡ್ ಒಳಗೆ ಉಪಯೋಗಿಸಿ ಉಳಿದ ಹಳೆಯ ಅಲ್ಯೂಮಿನಿಯಂ ವಯರ್ ತುಂಡುಗಳು ಬಿದ್ದಿರುವುದನ್ನು ಕಂಡು ಈ ಬಗ್ಗೆ ಅನುಮಾನಗೊಂಡ ಮ್ಯಾನೇಜರ್ ರಾಜೇಂದ್ರನ್ ಅವರು ತಮ್ಮ ರಿಸೀವಿಂಗ್ ಸ್ಟೇಷನ್ ನ ಕಂಪೌಂಡ್ ಒಳಗೆ ಇರಿಸಿದ ಅಲ್ಯೂಮಿನಿಯಂ ವಯ‌ರ್ ನ ಬಂಡಲ್‌ಗಳು, ಮತ್ತು ಇನ್ನಿತರ ಸಲಕರಣೆಗಳನ್ನು ಪರಿಶೀಲನೆ ನಡೆಸಿದಾಗ ಹಳೆಯ ಅಲ್ಯೂಮಿನಿಯಂ ವಯರ್‌ಗಳು ಕಳ್ಳತನವಾಗಿರುವುದು ತಿಳಿದು ಈ ವಿಚಾರ ಮೇಲಾಧಿಕಾರಿಗಳಿಗೆ ತಿಳಿಸಿದ ಬಳಿಕ ಮೇಲಾಧಿಕಾರಿಗಳು ಬಂದು ಕೂಲಂಕುಷವಾಗಿ ಪರಿಶೀಲನೆ ನಡೆಸಿದಾಗ ಅಂದಾಜು ಮೌಲ್ಯ ೫೦ ಸಾವಿರ ರೂಪಾಯಿ ಮೌಲ್ಯ ಸುಮಾರು ೧೧೦೦ ಕೆಜಿಯಷ್ಟು ಹಳೆಯ ಅಲ್ಯೂಮಿನಿಯಂ ವಯರ್ ಗಳು ಕಳ್ಳತನವಾಗಿರುವುದಾಗಿ ಬೆಳಕಿಗೆ ಬಂದಿತ್ತು.

    ಮ್ಯಾನೇಜ‌ರ್ ಆಗಿರುವ ರಾಜೇಂದ್ರನ್ ಎಂಬವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಮಾಡಿದ ಮೃತಪಟ್ಟ ಮುಸ್ತಾಕ್ ಮತ್ತು ಇತರರ ವಿರುದ್ಧ ಕಲಂ: ೩೩೧(೪), ೩೦೫ ಜೊತೆಗೆ ೩(೫)ಬಿ. ಎನ್ ಎಸ್ ಯಂತೆ ಜು.೧೧ ರಂದು ಪ್ರಕರಣ ದಾಖಲಿಸಲಾಗಿತ್ತು. ತನಿಖೆ ನಡೆಸಿದಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಬೆಳ್ತಂಗಡಿ ಪೊಲೀಸ್‌ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಮ್ ಮತ್ತು ಸಿಕಂದ‌ರ್ ಪಾಷ ತಂಡದ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

    Post Views: 8

    Related Posts

    ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಹ*ತ್ಯೆ

    July 16, 2026

    ಉಪ್ಪಿನಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ- 7 ಆರೋಪಿಗಳ ಬಂಧನ

    July 16, 2026

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ₹5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

    July 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಹ*ತ್ಯೆ

    July 16, 2026

    ಉಪ್ಪಿನಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ- 7 ಆರೋಪಿಗಳ ಬಂಧನ

    July 16, 2026

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ₹5.20 ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

    July 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.