Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಯೂಟ್ಯೂಬರ್‌ ಸಮೀರ್‌ ಗೆ ನೊಟೀಸ್ ಕೊಟ್ಟ ಪೊಲೀಸರನ್ನ ತರಾಟೆಗೆ ತೆಗೆದುಕೊಂಡ ಹೈಕೋರ್ಟ್
    ಇತ್ತೀಚಿನ ಸುದ್ದಿ

    ಯೂಟ್ಯೂಬರ್‌ ಸಮೀರ್‌ ಗೆ ನೊಟೀಸ್ ಕೊಟ್ಟ ಪೊಲೀಸರನ್ನ ತರಾಟೆಗೆ ತೆಗೆದುಕೊಂಡ ಹೈಕೋರ್ಟ್

    March 7, 2025
    Share

    ಬೆಂಗಳೂರು ಮಾರ್ಚ್ 07: ಬೆಳ್ತಂಗಡಿಯಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ವಿಡಿಯೋ ಮಾಡಿದ್ದ ಯೂಟ್ಯೂಬರ್‌ ಸಮೀರ್‌ ಎಂಡಿ ಗೆ ವಿಚಾರಣೆಗೆ ಹಾಜರಾಗುವಂತೆ ಬಳ್ಳಾರಿ ಪೊಲೀಸರು ರಾತ್ರೊರಾತ್ರಿ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಅಲ್ಲದೆ ಪೊಲೀಸರ ಕ್ರಮವನ್ನು ಹೈಕೋರ್ಟ್ ಕಟುವಾಗಿ ಟೀಕಿಸಿದೆ. ಬಳ್ಳಾರಿ ಪೊಲೀಸರು ಮಾರ್ಚ್ 5ರ ರಾತ್ರಿ ನೋಟಿಸ್‌ ಜಾರಿಗೊಳಿಸಿ, ಗುರುವಾರ ಬೆಳಿಗ್ಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಬಿಎನ್‌ಎಸ್‌ಎಸ್‌ ಸೆಕ್ಷನ್‌ 35(3) ಅಡಿ ನೋಟಿಸ್‌ ನೀಡಿರುವುದನ್ನು ವಜಾ ಮಾಡುವಂತೆ ಕೋರಿ ಬೆಂಗಳೂರಿನ ಸಮೀರ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.ವಾದ-ಪ್ರತಿವಾದ ಆಲಿಸಿದ ಪೀಠವು “ವಿಚಾರಣೆಗೆ ಹಾಜರಾಗುವಂತೆ ಬಿಎನ್‌ಎಸ್‌ಎಸ್‌ ಸೆಕ್ಷನ್‌ 35(3) ಅಡಿ ನೋಟಿಸ್‌ ಜಾರಿ ಮಾಡಿರುವುದನ್ನು ಸಮೀರ್‌ ಪ್ರಶ್ನಿಸಿದ್ದು, 30.12.2024ರಂದು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ವಿರುದ್ಧವಾಗಿ ಬಳ್ಳಾರಿ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ಸ್ಥಾಪಿತ ಕಾನೂನಿನ ಪ್ರಕಾರ ನೋಟಿಸ್‌ ಜೊತೆಗೆ ಎಫ್‌ಐಆರ್‌ ಪ್ರತಿ ಲಗತ್ತಿಸಬೇಕು. ಇದನ್ನು ಉಲ್ಲಂಘಿಸಲಾಗಿದೆ. ಹೀಗಾಗಿ, ಮುಂದಿನ ವಿಚಾರಣೆವರೆಗೆ ನೋಟಿಸ್‌ಗೆ ತಡೆಯಾಜ್ಞೆ ನೀಡಲಾಗಿದೆ” ಎಂದು ನ್ಯಾಯಾಲಯ ಆದೇಶಿಸಿದ್ದು, ವಿಚಾರಣೆಯನ್ನು ಮಾರ್ಚ್‌ 12ಕ್ಕೆ ಮುಂದೂಡಿದೆ.

    ಅರ್ಜಿದಾರರ ಪರ ವಕೀಲ ಎ ವೇಲನ್‌ ಅವರು “ಸಮೀರ್‌ ಯೂಟ್ಯೂಬರ್‌ ಆಗಿದ್ದು, ಸೌಜನ್ಯ ಕೊಲೆಗೆ ಸಂಬಂಧಿಸಿದಂತೆ ವಿಡಿಯೋ ಮಾಡಿ ಅಪ್‌ಲೋಡ್‌ ಮಾಡಿದ್ದರು. ಇದನ್ನು ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ. ಇದನ್ನು ಆಧರಿಸಿ ಪೊಲೀಸರು ಸ್ವಯಂಪ್ರೇರಿತವಾಗಿ ಬಿಎನ್‌ಎಸ್‌ ಸೆಕ್ಷನ್‌ 299ರ (ಧಾರ್ಮಿಕ ಭಾವನೆಗೆ ಧಕ್ಕೆ) ಅಡಿ ಪ್ರಕರಣ ದಾಖಲಿಸಿದ್ದಾರೆ ಎಂದರು, ಅಲ್ಲದೆ ವಿಡಿಯೋದಲ್ಲಿ ಯಾವುದೇ ಧರ್ಮದ ಬಗ್ಗೆ ಮಾತನಾಡಿಲ್ಲ ಆದರೂ ಪೊಲೀಸರು ಅರೆಸ್ಟ್ ಮಾಡಲಿಕ್ಕೆ ಆಗಮಿಸಿದ್ದರು ಎಂದು ಹೇಳಿದರು.

    ಈ ವೇಳೆ ಸರ್ಕಾರದ ಪರ ವಕೀಲರು “ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಸಮೀರ್‌ಗೆ ನೋಟಿಸ್‌ ಜಾರಿ ಮಾಡಿದ್ದಾರೆ ಎಂದರು. ಇದಕ್ಕೆ ಆಕ್ರೋಶಕೊಂಡ ನ್ಯಾಯಾಧೀಶರು ಇದು ಧರ್ಮಸ್ಥಳದ ಪ್ರಕರಣವೇ? ನೋಟಿಸ್‌ನೊಂದಿಗೆ ಲಗತ್ತಿಸಿರುವ ಎಫ್‌ಐಆರ್‌ ಎಲ್ಲಿ? ಇದೇ ನ್ಯಾಯಾಲಯದ ಆದೇಶ ಆಧರಿಸಿ ರಾಜ್ಯ ಸರ್ಕಾರವು ಹೊರಡಿಸಿರುವ ಸುತ್ತೋಲೆಯನ್ನು ನೋಡಿಲ್ಲವೇ? ಸುತ್ತೋಲೆಗೆ ವಿರುದ್ಧವಾಗಿ ಈ ವ್ಯಕ್ತಿ (ತನಿಖಾಧಿಕಾರಿ) ಹೇಗೆ ನಡೆದುಕೊಳ್ಳುತ್ತಾರೆ? ಬಿಎನ್‌ಎಸ್‌ ಸೆಕ್ಷನ್‌ 35(3)ರ ಅಡಿ ಯಾರನ್ನಾದರೂ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದರೆ ಎಫ್‌ಐಆರ್‌ ಅನ್ನು ಅದರ ಜೊತೆಗೆ ಲಗತ್ತಿಸಬೇಕು. ಅಂಚೆ ಮೂಲಕ ಕಳುಹಿಸಿ ಅದನ್ನು ಖಾತರಿಪಡಿಸಿರಬೇಕು. ಇದೊಂದೇ ದಾರಿ ಇರುವುದು. ವಾಟ್ಸಾಪ್‌ ಮೂಲಕವೂ ನೋಟಿಸ್‌ ಕಳುಹಿಸುವಂತಿಲ್ಲ. ಅದನ್ನು ತನಿಖಾಧಿಕಾರಿ ಪಾಲಿಸಿದ್ದಾರೆಯೇ? ಇದರಲ್ಲಿ ಅಂಥ ತುರ್ತೇನಿತ್ತು? ಪ್ರಭಾವಿಯಾದವರನ್ನು ಯೂಟ್ಯೂಬರ್‌ ವಿಡಿಯೊದಲ್ಲಿ ಬಿಂಬಿಸಿದ್ದಾರೆ ಎಂದೇ? ಅದು ಬಿಟ್ಟು ಬೇರೇನು ಇರಲು ಸಾಧ್ಯ?” ಎಂದು ಏರುಧ್ವನಿಯಲ್ಲಿ ಪ್ರಶ್ನಿಸಿತು.

    ಮುಂದುವರಿದು, “ಬುಧವಾರ ರಾತ್ರಿ 10.45 ನೋಟಿಸ್‌ ನೀಡಿ, ಬೆಳಿಗ್ಗೆ ಎದ್ದು ಬನ್ನಿ ಎಂದರೆ ಹೇಗೆ? ಎಫ್‌ಐಆರ್‌ ಇಲ್ಲ, ಏನಿಲ್ಲ? ಇದು ಸುತ್ತೋಲೆಗೆ ವಿರುದ್ಧವಾದ ಕ್ರಮ. ವಿಡಿಯೊದಲ್ಲಿ ಮಾನಹಾನಿಕಾರಕ ಅಂಶಗಳಿವೆ ಎಂದು ಯಾರು ದೂರು ನೀಡಿದ್ದಾರೆ? ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದಾರೆ. ಇದು ಯೂಟ್ಯೂಬರ್‌ ಮೂಲಭೂತ ಹಕ್ಕಿನ ವಿಚಾರವಾಗಿದೆ. ನೋಟಿಸ್‌ ಅನುಪಾಲಿಸಿಲ್ಲ ಎಂದರೆ ಮುಂದಿನ ಹಂತ ಬಂಧನವಾಗುತ್ತದೆ. ನಿಮ್ಮ ಉದ್ದೇಶ ಬಂಧಿಸಬೇಕೆಂಬುದಾಗಿದ್ದು, ಅವರು ವಿಚಾರಣೆಗೆ ಬಂದಿಲ್ಲ ಎಂಬ ಆಧಾರ ಸೃಷ್ಟಿಸುವ ಉದ್ದೇಶವನ್ನು ಹೊಂದಲಾಗಿದೆ. ಕಾನೂನಿನ ಅನ್ವಯ ನೋಟಿಸ್‌ ನೀಡದಿದ್ದರೆ ಸಮೀರ್‌ ವಿಚಾರಣೆಗೆ ಅನುಮತಿಸುವುದಿಲ್ಲ. ಕಾನೂನಿನ ಅನ್ವಯ ನೋಟಿಸ್‌ ನೀಡಿದಿದ್ದರೆ ಅದಕ್ಕೆ ಗೌರವ ನೀಡಲೇಬೇಕಿಲ್ಲ ಎಂಬುದು ಸ್ಥಾಪಿತ ಕಾನೂನಾಗಿದೆ. ಇನ್ನು ಬಂಧಿಸುವ ಪ್ರಶ್ನೆ ಎಲ್ಲಿದೆ? ಬಂಧನ ಇರಲಿ, ಸಮೀರ್‌ ವಿಚಾರಣೆಗೆ ಹಾಜರಾಗಬೇಕು ಎಂದು ನೀವು ಕೇಳುವಂತೆಯೂ ಇಲ್ಲ, ಅದು ದೂರದ ಮಾತು. ಕಾನೂನು ಏನಿದೆ ಎಂಬುದರ ಕುರಿತು ತನಿಖಾಧಿಕಾರಿಗೆ ತಿಳಿ ಹೇಳಬೇಕಿದೆ. ಕಾನೂನಿನ ಬಗ್ಗೆ ಅರಿವಿಲ್ಲದೇ ತನಿಖಾಧಿಕಾರಿ ಅಷ್ಟು ಅವಸರದಲ್ಲಿ ಅಧಿಕಾರ ಝಳಪಿಸಲು ಮುಂದಾಗಿದ್ದಾರೆ” ಎಂದು ಕಿಡಿಕಾರಿತು.

    Post Views: 288

    Related Posts

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.