ಕಾಸರಗೋಡು: ನಿಯಂತ್ರಣ ತಪ್ಪಿ ಸ್ಕೂಟರ್ ರಾಷ್ಟ್ರೀಯ ಹೆದ್ದಾರಿ ಬದಿಯ ಡಿವೈಡರ್‌ಗೆ ಬಡಿದ ಪರಿಣಾಮ ವಿದ್ಯಾರ್ಥಿ ಮೃತಪಟ್ಟ ಘಟನೆ ಕುಂಬಳೆ ಸಮೀಪದ ಮಾವಿನ ಕಟ್ಟೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಬಂದ್ಯೋಡು ಇಚ್ಲಂಗೋಡು ದಿನಾರ್ ನಗರದ ಯೂಸಫ್ (20) ಎಂದು ಗುರುತಿಸಲಾಗಿದೆ.
ಯೂಸಫ್ ಶಿರಿಯ ಶಾಲೆಯ ಪ್ಲಸ್ ಟು ವಿದ್ಯಾರ್ಥಿಯಾಗಿದ್ದನು. ಶಾಲೆಯಲ್ಲಿ ನಡೆದ ಓಣಂ ಕಾರ್ಯಕ್ರಮ ಮುಗಿಸಿ ಸಹಪಾಠಿಯನ್ನು ಮೊಗ್ರಾಲ್ ನ ಮನೆಗೆ ತಲುಪಿಸಿ ಮರಳುತ್ತಿದ್ದಾಗ ಕುಂಬಳೆ ಮಾವಿನ ಕಟ್ಟೆ ಬಳಿ ನಿಯಂತ್ರಣ ತಪ್ಪಿ ಸ್ಕೂಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದೆ.
ಗಂಭೀರ ಗಾಯಗೊಂಡ ಯೂಸಫ್ ನನ್ನು ಕುಂಬಳೆಯ ಆಸ್ಪತ್ರೆಗೆ ತಲುಪಿಸಿದರೂ ಅದಾಗಲೇ ಮೃತಪಟ್ಟಿದ್ದರು. ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.




